ನಿಷೇಧಿತ ಮಾದಕ ವಸ್ತು ಎಂಡಿಎಂಎ ಕಿಸ್ತೂಲ್ ಮಾರಾಟ ಮಾಡುತ್ತಿದ್ದ ಓರ್ವ ವಿದೇಶಿ ಡಗ್ ಪೆಡರ್ನ ಬಂಧನ. 515 ಗ್ರಾಂ ಎಂಡಿಎಂಎ ಕಿಸ್ಟಲ್, 1 ಮೊಬೈಲ್ ಫೋನ್ ವಶ. ಮೌಲ್ಯ 77 ಲಕ್ಷ.
ದಿನಾಂಕ:22/11/2024 ರಂದು ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಆರ್.ಆರ್. ಕಾಲೇಜ್ ರಸ್ತೆ, ರೈಲ್ವೆ ಗೇಟ್ ಹತ್ತಿರ ಓರ್ವ ವಿದೇಶಿ ಡ್ರಗ್ಪೆಡ್ಲರ್ನು ನಿಷೇದಿತ ಮಾದಕ ವಸ್ತು ಎಂಡಿಎಂಎ ಕ್ರಿಸ್ಟಲ್ನ್ನು ಗಿರಾಕಿಗಳಿಗೆ ಮಾರಾಟ ಮಾಡುತ್ತಾ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿರುತ್ತಾರೆಂದು ಬಾತ್ಮೀದಾರರಿಂದ ಖಚಿತ ಮಾಹಿತಿಯೊಂದು ಸಿಸಿಬಿ ಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳಿಗೆ ದೊರೆತ್ತಿರುತ್ತದೆ.
ಈ ಮಾಹಿತಿಯನ್ನು ಆಧಾರಿಸಿ ದಿನಾಂಕ:22/11/2024 ರಂದು ಸಿಸಿಬಿ ಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳು ಬಾತ್ಮೀದಾರರು ತಿಳಿಸಿದ ಸ್ಥಳಕ್ಕೆ ಧಾವಿಸಿ, ದಾಳಿ ಮಾಡಿ, ಓರ್ವ ವಿದೇಶಿ ಡ್ರಗ್ ಪೆಡ್ಲರ್ನನ್ನು ವಶಕ್ಕೆ ಪಡೆದುಕೊಳ್ಳಲಾಯಿತು.
ವಶಕ್ಕೆ ಪಡೆದ ವಿದೇಶಿ ಮೂಲದ ವ್ಯಕ್ತಿಯಿಂದ 515 ಗ್ರಾಂ ಎಂಡಿಎಂಎ ಕ್ರಿಸ್ಟಲ್, ಒಂದು ಎಲೆಕ್ಟ್ರಾನಿಕ್ ತೂಕದ ಯಂತ್ರ ಮತ್ತು ಒಂದು ಮೊಬೈಲ್ ಫೋನ್ನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ಇವುಗಳ ಒಟ್ಟು ಮೌಲ್ಯ 77 ಲಕ್ಷ.

ವಶಕ್ಕೆ ಪಡೆದ ವಿದೇಶಿ ಮೂಲದ ವ್ಯಕ್ತಿಯನ್ನು ಸುದೀರ್ಘವಾಗಿ ವಿಚಾರಣೆ ಮಾಡಲಾಗಿ, ಈ ವ್ಯಕ್ತಿಯು ಮೂಲತಃ ವಿದೇಶಿ ಪ್ರಜೆಯಾಗಿದ್ದು, 2017 ರಲ್ಲಿ ಬಿಜಿನೆಸ್ ವೀಸಾ ಪಡೆದು ಭಾರತಕ್ಕೆ ಬಂದಿದ್ದು, ಮೋಜಿನ ಜೀವನ ನಡೆಸುವ ಸಲುವಾಗಿ ಮತ್ತು ಕಡಿಮೆ ಸಮಯದಲ್ಲಿ ಹೆಚ್ಚಿನ ಹಣ ಗಳಿಸುವ ದುರುದ್ದೇಶದಿಂದ ಬೆಂಗಳೂರಿನಲ್ಲಿ ನೆಲೆಸಿರುವ ಪರಿಚಯಸ್ಥ ವ್ಯಕ್ತಿಗಳಿಂದ ಕಡಿಮೆ ಬೆಲೆಗೆ ಮಾದಕ ವಸ್ತುವಾದ ಎಂ.ಡಿ.ಎಂ.ಎ ಕ್ರಿಸ್ಟಲ್ ಅನ್ನು ಖರೀದಿ ಮಾಡಿ ಒಂದು ಗ್ರಾಂ ಗೆ * 12 ಸಾವಿರದಿಂದ 15 ಸಾವಿರದಂತೆ ಹೆಚ್ಚಿನ ಬೆಲೆಗೆ ಕಾಲೇಜು ವಿದ್ಯಾರ್ಥಿಗಳಿಗೆ, ಐಟಿ/ಬಿಟಿ ಉದ್ಯೋಗಿಗಳಿಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿರುವುದು ಪ್ರಾಥಮಿಕ ವಿಚಾರಣೆಯಿಂದ ತಿಳಿದು ಬಂದಿದೆ.
ದಿನಾಂಕ:22/11/2024 ರಂದು ಆರೋಪಿಯನ್ನು ಸೋಲದೇವನಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಯವರಿಗೆ ಮುಂದಿನ ಕ್ರಮಕ್ಕಾಗಿ ಒಪ್ಪಿಸಿದ್ದು, ಸೋಲದೇವನಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಯವರು ಪ್ರಕರಣ ದಾಖಲಿಸಿ, ವಿಚಾರಣೆ ಕೈಗೊಂಡು ನಂತರ ಆರೋಪಿಯನ್ನು ದಿನಾಂಕ:23/11/2024 ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.

ಈ ಕಾರ್ಯಾಚರಣೆಯನ್ನು ಸಿ.ಸಿ.ಬಿ ಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಯವರ ತಂಡವು ಯಶಸ್ವಿಯಾಗಿ ಕೈಗೊಂಡಿರುತ್ತಾರೆ.









