ಮಾನ್ಯ ಶ್ರೀ ಪ್ರದೀಪ್ ಗುಂಟಿ, ಐ.ಪಿ.ಎಸ್., ಪೊಲೀಸ್ ವರೀಷ್ಠಾಧಿಕಾರಿಗಳು, ಬೀದರ ಜಿಲ್ಲೆ ರವರ ಮುಂದಾಳತ್ವದಲ್ಲಿ ಇಂದು ದಿನಾಂಕ : 16/04/2025 ರಂದು ಸನ್ಮಾನ್ಯ ಶ್ರೀ ಸಿದ್ದರಾಮಯ್ಯ, ಮಾನ್ಯ ಮುಖ್ಯಮಂತ್ರಿಗಳು, ಕರ್ನಾಟಕ ರಾಜ್ಯ ಸರ್ಕಾರ, ಸನ್ಮಾನ್ಯ ಶ್ರೀ ಡಿ.ಕೆ ಶಿವಕುಮಾರ, ಉಪ ಮುಖ್ಯ ಮಂತ್ರಿಗಳು, ಕರ್ನಾಟಕ ರಾಜ್ಯ ಸರ್ಕಾರ ರವರಿಂದ ಬೀದರ ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭ ಕಾರ್ಯಕ್ರಮಗಳ ಸಂದರ್ಭದಲ್ಲಿ ಮಾನ್ಯರವರ ಸುರಕ್ಷತೆ, ಕಾನೂನು ಮತ್ತು ಸುವ್ಯವಸ್ಥೆ, ಸಂಚಾರಿ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಬಂದೋಬಸ್ತ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಬೀದರ ಜಿಲ್ಲೆಯ ಮತ್ತು ಅನ್ಯ ಜಿಲ್ಲೆಯ ಎಲ್ಲಾ ಸಹದ್ಯೋಗಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ರವರೆಲ್ಲರೂ ಸತತವಾಗಿ ಶ್ರಮಿಸಿ ಕಾರ್ಯಕ್ರಮವು ಶಾಂತಿಯುತವಾಗಿ ಯಶಸ್ವಿಗೊಳಿಸುವಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ ಸಮಸ್ತ ಪೊಲೀಸ್ ಅಧಿಕಾರಿ, ಸಿಬ್ಬಂದಿರವರಿಗೆಲ್ಲರಿಗೂ ವಯಕ್ತಿಕವಾಗಿ ಅಭಿನಂದನೆಗಳು.
ಬೀದರ ಜಿಲ್ಲಾ ಪೊಲೀಸ್ ಜಿಲ್ಲೆಯಲ್ಲಿ ಗಣ್ಯ ವ್ಯಕ್ತಿಗಳ ಸುರಕ್ಷತೆ, ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸದಾ ಕಾರ್ಯಪ್ರವರ್ತರಾಗಿದ್ದು, ಬೀದರ ಜಿಲ್ಲಾ ಪೊಲೀಸ್ ಸದಾ ನಿಮ್ಮ ಸೇವೆಯಲ್ಲಿ.









