On behalf of the Competitive Examination Training Center of Karnataka State Open University, Karnataka Public Service Commission has decided to conduct a 30-day training for the KAS examination to be conducted on December 29, 2024 at the head office in Mysore.
Aspirants can register their names till November 16 at the office of Karamuvi Competitive Examination Training Center in the premises of Karnataka State Open University, Mysore between 10.00 am to 5.00 pm.
For more details please contact the phone number 0821-2515944 Karnataka State Open University Chancellor Prof. K.B. Praveen said in a release.
ಕೆ.ಎ.ಎಸ್ ಪರೀಕ್ಷೆಗೆ ತರಬೇತಿ
ಬೆಂಗಳೂರು, ನವೆಂಬರ್ 07, (ಕರ್ನಾಟಕ ವಾರ್ತೆ):
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ, ಕರ್ನಾಟಕ ಲೋಕ ಸೇವಾ ಆಯೋಗದವರು 2024ರ ಡಿಸೆಂಬರ್ 29ರಂದು ನಡೆಸಲಿರುವ ಕೆಎಎಸ್ ಪರೀಕ್ಷೆಗೆ 30 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಆಸಕ್ತರು ನವೆಂಬರ್ 16 ರೊಳಗಾಗಿಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು.
ಹೆಚ್ಚಿನ ವಿವರಗಳಿಗೆ 0821-2515944ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವಂತೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಕೆ.ಬಿ. ಪ್ರವೀಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









