ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ, ಒಟ್ಟು ಮೂವರು ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. ಇವರಲ್ಲಿ ಇಬ್ಬರು ವಿದೇಶಿ ಪ್ರಜೆಗಳು ಸೇರಿದ್ದಾರೆ.
ವಿದ್ಯಾರ್ಥಿ ವೀಸಾದಡಿ ಭಾರತಕ್ಕೆ ಬಂದಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ.ಇವರಿಂದ 1 ಕೆ.ಜಿ 120 ಗ್ರಾಂ ಎಂ.ಡಿ.ಎಂ.ಎ (MDMA) ಕ್ರಿಸ್ಟಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಮಾದಕ ವಸ್ತುವಿನ ಮೌಲ್ಯ ಸುಮಾರು 2.20 ಕೋಟಿ ಎಂದು ಅಂದಾಜಿಸಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ಕೇರಳದಿಂದ ಹೈಡೋ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಒಬ್ಬ ಹೊರ ರಾಜ್ಯದ ಡ್ರಗ್ ಪೆಡ್ಲರ್‌ನನ್ನು ಬಂಧಿಸಲಾಗಿದೆ.ಇವನಿಂದ 2 ಕೆ.ಜಿ ಹೈಡೋ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯ ಸುಮಾರು ₹ 2 ಕೋಟಿ ಇದೆ.
ಈ ಎರಡು ಪ್ರಕಣಗಳಲ್ಲಿ ವಶಪಡಿಸಿಕೊಂಡ ಒಟ್ಟು ಮಾದಕ ದ್ರವ್ಯಗಳ ಮೌಲ್ಯ 4 ಕೋಟಿ 20 ಲಕ್ಷ ಆಗಿದೆ. ಬಂಧಿತ ಎಲ್ಲ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈ ಯಶಸ್ವಿ ಕಾರ್ಯಾಚರಣೆಗಳೆರಡನ್ನೂ ನಗರ ಪೊಲೀಸ್ ಆಯುಕ್ತರಾದ ಶ್ರೀ. ಸೀಮಾಂತ್ ಕುಮಾರ್ ಸಿಂಗ್. ಐಪಿಎಸ್ ರವರ ಮಾರ್ಗದರ್ಶನದಲ್ಲಿ, ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ಶ್ರೀ. ಅಜಯ್ ಹಿಲೋರಿ, ಐಪಿಎಸ್ ಮತ್ತು ಉಪ ಪೊಲೀಸ್ ಆಯುಕ್ತರು, ಅಪರಾಧ-2 ಶ್ರೀ. ರಾಜಾ ಇಮಾಮ್ ಕಾಸಿಂನೇತೃತ್ವದಲ್ಲಿ, ಎಸಿಪಿ, ಶ್ರೀ ಹೆಚ್.ಕೆ. ಮಹಾನಂದ ಮತ್ತು ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ಶ್ರೀ ರಕ್ಷಿತ್ ಎ.ಕೆ., ಶ್ರೀ ಲಕ್ಷ್ಮಿನಾರಾಯಣ ಕೆ.. ಶ್ರೀ ಮಂಜಪ್ಪ ಹಾಗೂ ಸಿಸಿಬಿ ಯ ಮಾದಕ ದ್ರವ್ಯ ನಿಗ್ರಹ ದಳದ ಇತರೆ ಅಧಿಕಾರಿ/ಸಿಬ್ಬಂದಿಯವರುಗಳು ಕೈಗೊಂಡಿರುತ್ತಾರೆ.







