08 ದ್ವಿ-ಚಕ್ರವಾಹನ, 38 ಮೊಬೈಲ್ ಫೋನ್‌ಗಳು ಹಾಗೂ ನಗದು 1,150/- ವಶ. ಒಟ್ಟು ಮೌಲ್ಯ 5.50 ಲಕ್ಷ. ಗೋವಿಂದರಾಜನಗರ ಪೊಲೀಸ್ ಠಾಣಾ ಸರಹದ್ದಿನ ಮೂಡಲಪಾಳ್ಯದಲ್ಲಿ ವಾಸವಾಗಿರುವ ಪಿರಾದುದಾರರು 08:13/11/2024 ರಂದು ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:12/1l/2024 ರಂದು ರಾತ್ರಿ ತಮ್ಮ ದ್ವಿ-ಚಕ್ರ ವಾಹನವನ್ನು ವಿಜಯನಗರದ ಪುಡ್ ಸ್ಟ್ರೀಟ್ ಬಳಿ ನಿಲ್ಲಿಸಿ, ಸ್ನೇಹಿತರ ಜೊತೆ ಊಟ ಮಾಡುವುದಕ್ಕೆ ಹೋಗಿರುತ್ತಾರೆ. ಊಟ ಮುಗಿಸಿ ವಾಪಸ್ ತಡರಾತ್ರಿ ಬಂದು ನೋಡಲಾಗಿ ಪಿರಾದುದಾರರ ದ್ವಿ-ಚಕ್ರ ವಾಹನವನ್ನು ಯಾರೋ ಅಪರಿಚಿತರು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಠಾಣೆಯಲ್ಲಿ ದ್ವಿ-ಚಕ್ರ ವಾಹನ ಕಳವು ಪ್ರಕರಣದ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ದಿನಾಂಕ:13/ll/2024 ರಂದು ಎಂ.ಸಿ.ಲೇಔಟ್‌ನಲ್ಲಿರುವ ನಚಿಕೇತ ಪಾರ್ಕ್ ಬಳಿ ಪೊಲೀಸ್ ಸಿಬ್ಬಂದಿಯವರು ದ್ವಿ-ಚಕ್ರ ವಾಹನಗಳನ್ನು ತಪಾಸಣೆ ಮಾಡುವ ಸಮಯದಲ್ಲಿ, ಇಬ್ಬರು ವ್ಯಕ್ತಿಗಳನ್ನು ಈ ಪ್ರಕರಣದಲ್ಲಿ ಕಳುವಾಗಿದ್ದ ದ್ವಿ-ಚಕ್ರ ವಾಹನ ಸಮೇತ ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಗಳನ್ನು ವಿಚಾರಣೆ ಮಾಡಲಾಗಿ ಈ ಪ್ರಕರಣದಲ್ಲಿ ದ್ವಿ-ಚಕ್ರ ವಾಹನವನ್ನು ಕಳವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾರೆ ಹಾಗೂ ಇನ್ನೂ ಮೂವರು ಸಹಚರರು ಸೇರಿಕೊಂಡು ಬೆಂಗಳೂರಿನ ವಿವಿಧ ಕಡೆಗಳಲ್ಲಿ ದ್ವಿ-ಚಕ್ರ ವಾಹನ ಕಳವು ಮತ್ತು ಮೊಬೈಲ್ ಫೋನ್‌ಗಳನ್ನು ರಾಬರಿ ಮಾಡಿರುವುದಾಗಿ ತಿಳಿಸಿರುತ್ತಾರೆ.

ದಿನಾಂಕ:14/11/2024 ರಂದು ಇಬ್ಬರು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 9 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.
ವಶಕ್ಕೆ ಪಡೆದ ಇಬ್ಬರು ವ್ಯಕ್ತಿಗಳನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಲಾಗಿ, ಇತರೆ ಮೂವರು ಸಹಚರರ ಬಗ್ಗೆ ಮಾಹಿತಿಯನ್ನು ನೀಡಿದ್ದು, ಅದರಂತೆ ದಿನಾಂಕ:15/11/2024 ರಂದು ಜಿ.ಕೆ.ಡಬ್ಲ್ಯೂ ಲೇಔಟ್ ಬಸ್ ನಿಲ್ದಾಣದ ಸಮೀಪ ಮೂವರು ವ್ಯಕ್ತಿಗಳನ್ನು 2 ದ್ವಿ-ಚಕ್ರ ವಾಹನ ಸಮೇತ ವಶಕ್ಕೆ ಪಡೆಯಲಾಯಿತು. ವಶಕ್ಕೆ ಪಡೆದ ಮೂವರು ವ್ಯಕ್ತಿಗಳನ್ನು ವಿಚಾರಣೆ ಮಾಡಲಾಗಿ ಬೆಂಗಳೂರಿನ ವಿವಿಧ ಕಡೆಗಳಲ್ಲಿ ದ್ವಿ-ಚಕ್ರ ವಾಹನ ಮತ್ತು ಮೊಬೈಲ್ ಫೋನ್‌ಗಳನ್ನು ಕಳವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾರೆ.
ದಿನಾಂಕ:16/11/2024 ರಂದು ಜಿ.ಕೆ.ಡಬ್ಲ್ಯೂ ಲೇಔಟ್ ಬಳಿ ಇರುವ ಸಂಗೋಳ್ಳಿರಾಯಣ್ಣ ಪಾರ್ಕ್ ಬಳಿ ಕಳವು ಮಾಡಿ ನಿಲ್ಲಿಸಿದ್ದ 5 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಯಿತು. ಈ 5 ದ್ವಿ-ಚಕ್ರ ವಾಹನಗಳ ಪೈಕಿ ಒಂದು ದ್ವಿ-ಚಕ್ರ ವಾಹನದ ಡಿಕ್ಕಿಯಲ್ಲಿಟ್ಟಿದ್ದ 38 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಯಿತು.

ಈ ಪ್ರಕರಣದ ಆರೋಪಿಗಳ ವಶದಿಂದ ಒಟ್ಟು 8 ದ್ವಿ-ಚಕ್ರ ವಾಹನ ಮತ್ತು 38 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಒಟ್ಟು ಮೌಲ್ಯ 5,50,000/-(ಐದು ಲಕ್ಷದ ಐವತ್ತು ಸಾವಿರ ರೂಪಾಯಿ).
ಈ ಪ್ರಕರಣದ ಆರೋಪಿಗಳ ಬಂಧನದಿಂದ 1) ಗೋವಿಂದರಾಜನಗರ ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ, 2) ಬಸವೇಶ್ವರ ನಗರ ಠಾಣೆಯ-1 ದ್ವಿ-ಚಕ್ರ ವಾಹನ ಕಳವು 1-ರಾಬರಿ ಪ್ರಕರಣ, 3) ಕಾಮಾಕ್ಷಿಪಾಳ್ಯ ಠಾಣೆಯ-1 ರಾಬರಿ ಪ್ರಕರಣ, 4) ಗಂಗಮ್ಮನ ಗುಡಿ ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ, 5) ಯಲಹಂಕ ನ್ಯೂಟೌನ್ ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ, 6) ಕೋಣನಕುಂಟೆ ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ ಸೇರಿದಂತೆ ಒಟ್ಟು 5 ದ್ವಿ-ಚಕ್ರ ವಾಹನ ಕಳವು ಪ್ರಕರಣ ಮತ್ತು 2 ರಾಬರಿ ಪ್ರಕರಣ ಪತ್ತೆಯಾಗಿರುತ್ತವೆ. ಉಳಿದ 3 ದ್ವಿ-ಚಕ್ರ ವಾಹನ ಮಾಲೀಕರುಗಳು ಹಾಗೂ 38 ಮೊಬೈಲ್ ಫೋನ್‌ಗಳ ವಾರಸುದಾರರನ್ನು ಪತ್ತೆಮಾಡಬೇಕಾಗಿರುತ್ತದೆ. ತನಿಖೆ ಪ್ರಗತಿಯಲ್ಲಿರುತ್ತದೆ.
ದಿನಾಂಕ:16/11/2024 ರಂದು ಐವರು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ, ಮಾನ್ಯ ನ್ಯಾಯಾಲಯವು ಐವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.

ಈ ಕಾರ್ಯಾಚರಣೆಯನ್ನು ಶ್ರೀ. ಗಿರೀಶ್ ಎಸ್ ಐ.ಪಿ.ಎಸ್ ಉಪ ಪೊಲೀಸ್ ಆಯುಕ್ತರು ಪಶ್ಚಿಮ ವಿಭಾಗ ರವರ ನೇತೃತ್ವದಲ್ಲಿ, ಶ್ರೀ.ಚಂದನ್ ಕುಮಾ ಎನ್ಸಹಾಯಕ ಪೊಲೀಸ್ ಆಯುಕ್ತರು ವಿಜಯನಗರ ಉಪ ವಿಭಾಗ ರವರ ಮಾರ್ಗದರ್ಶನದಲ್ಲಿ, ಗೋವಿಂದರಾಜನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ.ಸುಬ್ರಮಣಿ.ಕೆ ರವರ ಅಧಿಕಾರಿ/ಸಿಬ್ಬಂದಿಯವರ ತಂಡ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.









