11 ಮೊಬೈಲ್ ಫೋನ್‌ಗಳು, 01 ದ್ವಿ-ಚಕ್ರ ವಾಹನ ವಶ, ಮೌಲ್ಯ * 4.75 ಲಕ್ಷ,
ಹೆಣ್ಣೂರು ಪೊಲೀಸ್ ಠಾಣಾ ಸರಹದ್ದಿನ ಕಲ್ಯಾಣನಗರದಲ್ಲಿರುವ ಎಲೆಕ್ಟ್ರಾನಿಕ್ ಅಂಗಡಿಯ ಮಾಲೀಕರು 20៥:08/12/2024 ໐໖ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ದಿನಾಂಕ:07/12/2024 ರಂದು ಬೆಳಿಗ್ಗೆ ಬಂದು ನೋಡಲಾಗಿ, ಅಂಗಡಿಯ ಹಿಂಭಾಗದಲ್ಲಿರುವ ಬಾಗಿಲನ್ನು ಮುರಿದು, ಅಂಗಡಿಯಲ್ಲಿಟ್ಟಿದ್ದ 14 ವಿವಿಧ ಕಂಪನಿಯ ಮೊಬೈಲ್ ಫೋನ್‌ಗಳನ್ನು ಯಾರೋ ಅಪರಿಚಿತರು ಕಳುವು ಮಾಡಿಕೊಂಡು ಹೋಗಿರುತ್ತಾರೆಂದು ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಮೊಬೈಲ್ ಕಳವು ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:01/02/2025 ರಂದು ಕೆ.ಆರ್.ಪುರಂನ ಟಿನ್ ಫ್ಯಾಕ್ಟರಿ ಬಳಿ ಓರ್ವ ವ್ಯಕ್ತಿಯನ್ನು ದ್ವಿ-ಚಕ್ರ ವಾಹನ ಮತ್ತು 01 ಮೊಬೈಲ್ ಫೋನ್ ಸಮೇತ ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಲಾಗಿ, ಈ ಪ್ರಕರಣದಲ್ಲಿ ಮೊಬೈಲ್ ಫೋನ್‌ಗಳನ್ನು ಕಳವು ಮಾಡಿರುವುದಾಗಿ ತಪ್ರೊಪ್ಪಿಕೊಂಡಿರುತ್ತಾನೆ.
ದಿನಾಂಕ:01/02/2025 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 05 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.

ಪೊಲೀಸ್ ಅಭಿರಕ್ಷೆಗೆ ಪಡೆದ ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆ ಮಾಡಲಾಗಿ, ಪ್ರಕರಣದಲ್ಲಿ ಕಳವು ಮಾಡಿದ್ದ ಮೊಬೈಲ್ ಫೋನ್‌ಗಳನ್ನು ಮಾರಾಟ ಮಾಡುವ ಸಲುವಾಗಿ ನೇತ್ರಾವತಿ ಬಡಾವಣೆ. ಉದಯನಗರದಲ್ಲಿ ವಾಸವಿರುವ ಆತನ ಮನೆಯಲ್ಲಿಟ್ಟಿರುವುದಾಗಿ ತಿಳಿಸಿರುತ್ತಾನೆ. ಆತನ ವಾಸದ ಮನೆಯಿಂದ ದಿನಾಂಕ:04/02/2025 ರಂದು 10 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ.
ಈ ಪ್ರಕರಣದ ಆರೋಪಿಯ ವಶದಿಂದ ಒಟ್ಟಾರೆ 11 ಮೊಬೈಲ್ ಫೋನ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ 01 ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಮೌಲ್ಯ 4,75,000/-(ನಾಲ್ಕು ಲಕ್ಷದ ಎಪ್ಪತ್ತೈದು ಸಾವಿರ ರೂಪಾಯಿ).
ದಿನಾಂಕ:06/02/2025 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.
ಈ ಕಾರ್ಯಾಚರಣೆಯನ್ನು ಶ್ರೀ. ಡಿ. ದೇವರಾಜ, ಐಪಿಎಸ್, ಉಪ ಪೊಲೀಸ್ ಆಯುಕ್ತರು, ಪೂರ್ವ ವಿಭಾಗ ಮತ್ತು ಶ್ರೀ. ಉಮಾಶಂಕರ್.ಎಂ.ಹೆಚ್ ಎ.ಸಿ.ಪಿ.ಬಾಣಸವಾಡಿ ಉಪ ವಿಭಾಗ ರವರ ಮಾರ್ಗದರ್ಶನದಲ್ಲಿ, ಹೆಣ್ಣೂರು ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ. ದೀಪಕ್.ಎಲ್ರವರ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಪತ್ತೆ ಮಾಡುವಲ್ಲಿ. ಯಶಸ್ವಿಯಾಗಿರುತ್ತಾರೆ.









