ಬೆಂಗಳೂರು ನಗರದಲ್ಲಿ ಕ್ರಿಸ್ಮಸ್ ಆಚರಣೆ ಹಾಗೂ ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಗೃಹ ಸಚಿವ ಡಾ .ಜಿ ಪರಮೇಶ್ವರ್ ಸಭೆ ನಡೆಸಿದರು

ನಗರ ಪೊಲೀಸರು ಕೈಗೊಂಡಿರುವ ಮುಂಜಾಗ್ರತಾ ಕ್ರಮ, ಬಂದೋಬಸ್ತ್ ವ್ಯವಸ್ಥೆ ಹಾಗೂ ಸುರಕ್ಷತಾ ಕ್ರಮಗಳ ಕುರಿತು ಚರ್ಚಿಸಿ ಇನ್ನು ಕೆಲವು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು

ಈ ಸಂದರ್ಭದಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ್, ಸಿಸಿಬಿ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಹಾಗೂ ಎಲ್ಲ ವಿಭಾಗದ ಉಪ ಪೊಲೀಸ್ ಆಯುಕ್ತರು, ಸಹಾಯಕ ಪೊಲೀಸ್ ಆಯುಕ್ತರು ಉಪಸ್ಥಿತರಿದ್ದರು.










