ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ತಿರುಮಲ ಶೆಟ್ಟಿ ಹಳ್ಳಿ ಪೊಲೀಸರು ಮತ್ತು ಆಂಧ್ರ ಪೋಲಿಸರ ಜಂಟಿ ಕಾರ್ಯಾಚರಣೆ ನಡೆಸಿ ಕೋಟ್ಯಂತರ ಮೌಲ್ಯದ 180 ರಕ್ತ ಚಂದನದ ತುಂಡುಗಳನ್ನು ವಶಕ್ಕೆ ಪಡೆದುಕೊಳ್ಳಲಾಯಿತು.
ಆಂಧ್ರಪ್ರದೇಶದ ತಿರುಪತಿಯಲ್ಲಿ ರಕ್ತ ಚಂದನಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಿತ್ತು.
ಆರೋಪಿಗಳು ನೀಡಿದ ಮಾಹಿತಿಯನ್ನು ಆಧರಿಸಿ ಹೊಸಕೋಟೆ ತಾಲೂಕಿನ ತಿರುಮಲ ಶೆಟ್ಟಿಹಳ್ಳಿ ಠಾಣ ವ್ಯಾಪ್ತಿಯಲ್ಲಿ ಶೋಧ ಕಾರ್ಯವನ್ನು ನಡೆಸಿದರು.
ತಿರುಮಲ ಶೆಟ್ಟಿ ಹಳ್ಳಿ ಪೊಲೀಸರು ಮತ್ತು ಆಂಧ್ರ ಪೊಲೀಸರು ಜಂಟಿ ಕಾರ್ಯಚರಣೆ ನಡೆಸಿ ಹೊಸಕೋಟೆ ತಾಲೂಕಿನ ಕಟ್ಟಿಗೆನಹಳ್ಳಿ ಗ್ರಾಮದ ನೀಲಗಿರಿ ತೋಪಿನಲ್ಲಿ ಅಡಗಿಸಿಟ್ಟಿದ್ದ ಕೋಟ್ಯಾಂತರ ರೂ ಮೌಲ್ಯದ 180 ರಕ್ತಚಂದನ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.
ಆಂಧ್ರ ಪೊಲೀಸರ ತನಿಖೆಗೆ ಹೊಸಕೋಟೆ ಉಪವಿಭಾಗದ ಪೊಲೀಸರು ಸಾತ್ ನೀಡಿದ್ದು.
ಪತ್ತೆಯಾದ ರಕ್ತ ಚಂದನದ ತುಂಡುಗಳನ್ನು ಆಂಧ್ರ ಪೊಲೀಸರು ತಮ್ಮ ರಾಜ್ಯಕ್ಕೆ ರವಾನಿಸಿಕೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕೆಲ ಗ್ರಾಮಗಳು ಅಕ್ರಮ ರಕ್ತ ಚಂದನ ಸಂಗ್ರಹಿಸುವುದು ಸಾಮಾನ್ಯವಾಗಿದು ಈ ಬಾರಿ ಒಂದು ಕೋಟಿ ಮೌಲ್ಯದ ರಕ್ತ ಚಂದನ ಕಟ್ಟಿಗೆನಹಳ್ಳಿಯಲ್ಲಿ ಅಡಗಿಸಲು ಸಹಕಾರ ನೀಡಿದವರು ಯಾರು ಎಂದು ಪೊಲೀಸರ ತನಿಖೆಯಿಂದ ತಿಳಿಯಬೇಕಾಗುತ್ತದೆ.
ವರದಿ
ಶಶಿಕುಮಾರ್ ವಿ








