ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಕಳ್ಳತನ ಮಾಡುತ್ತಿದ್ದ ಹೊರ ರಾಜ್ಯದ ಮೂವರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 12 ದೇವರ ವಿಗ್ರಹಗಳು, ಪೂಜಾ ಸಾಮಗ್ರಿಗಳು ಮತ್ತು ಒಂದು ಆಟೋ ರಿಕ್ಷಾ ಸೇರಿದಂತೆ ಸುಮಾರು 6.50 ಲಕ್ಷಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ರಾತ್ರಿ ದೇವಸ್ಥಾನದ ಬಾಗಿಲು ಮುರಿದು, ವಿಗ್ರಹಗಳು, ಹುಂಡಿಯ ಹಣ ಮತ್ತು ಗಂಟೆಗಳನ್ನು ಕಳ್ಳತನ ಮಾಡಲಾಗಿತ್ತು ಎಂದು ಮುನೇಶ್ವರಸ್ವಾಮಿ ದೇವಸ್ಥಾನದ ಅರ್ಚಕರು ತಿಳಿಸಿದ್ದರು. ಪೊಲೀಸರು ಓರ್ವ ಅನುಮಾನಾಸ್ಪದ ವ್ಯಕ್ತಿಯನ್ನು ವಶಕ್ಕೆ ಪಡೆದರು. ವಿಚಾರಣೆ ವೇಳೆ ಆತ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದು, ತನ್ನ ಇಬ್ಬರು ಸಹಚರರ ಬಗ್ಗೆ ಮಾಹಿತಿ ನೀಡಿದ್ದಾನೆ. ಒಟ್ಟು ಮೂವರು ಆರೋಪಿಗಳ ಬಂಧನದಿಂದ ಕಾಡುಗೋಡಿ, ಹೊಸಕೋಟೆ ಮತ್ತು ಆವಲಹಳ್ಳಿ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು ನಾಲ್ಕು ಕಳವು ಪ್ರಕರಣಗಳು ಪತ್ತೆಯಾಗಿವೆ.
ಈ ಕಾರ್ಯಾಚರಣೆಯನ್ನು ವೈಟ್‌ಫೀಲ್ಡ್ ಉಪ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ. ಕೆ ಪರಶುರಾಮ್ ಮತ್ತು ಸಹಾಯಕ ಪೊಲೀಸ್ ಕಮಿಷನರ್ ಶ್ರೀಮತಿ. ರೀನಾ ಸುವರ್ಣ ಅವರ ಮಾರ್ಗದರ್ಶನದಲ್ಲಿ ಕಾಡುಗೋಡಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶ್ರೀ. ರಂಗಸ್ವಾಮಿ ಮತ್ತು ಸಿಬ್ಬಂದಿಯ ತಂಡ ಯಶಸ್ವಿಯಾಗಿ ನಡೆಸಿದೆವರದಿ :- ಮೋಹನ್ ಕುಮಾರ್ ಎಸ್ ನಾಯ್ಕ್









