ಕೆ ಆರ್ ಪುರ ಪೊಲೀಸ್ ಠಾಣಾ, ಸರಹದ್ದಿನ ಚಿಕ್ಕ ಬಸವನಪುರದಲ್ಲಿ ವಾಸವಿರುವ ಪಿರಿಯಾದುದಾರರು ಕೆಆರ್ ಪುರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಿಯಾದುದಾರರು ರಾತ್ರಿ ದ್ವಿಚಕ್ರ ವಾಹನವನ್ನು ತಾನು ವಾಸಿಸುವ ಮನೆಯ ಮುಂಭಾಗದಲ್ಲಿ ಲಾಕ್ ಮಾಡಿ ನಿಲ್ಲಿಸಿ ಹೋಗಿರುತ್ತಾರೆ. ಮಾರನೇ ದಿನ ಬೆಳಿಗ್ಗೆ ದ್ವಿಚಕ್ರವಾಹನವನ್ನು ನೋಡಲಾಗಿ, ದ್ವಿಚಕ್ರವಾಹನವು ಕಳುವಾಗಿರುವುದಾಗಿ ತಿಳಿಸಿರುತ್ತಾರೆ. ಈ ಕುರಿತು ಕೆಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಕೆಯನ್ನು ಮುಂದುವರಿಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಭಾತ್ಮಿದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ ಪರಪ್ಪನ ಅಗ್ರಹಾರದ ಹೊಸೂರು ರಸ್ತೆಯಲ್ಲಿ ಓರ್ವ ವ್ಯಕ್ತಿಯನ್ನು ದ್ವಿಚಕ್ರ ವಾಹನ ಸಮೇತ ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆ ಮಾಡಲಾಗಿ ಈ ಪ್ರಕರಣದಲ್ಲಿ ದ್ವಿಚಕ್ರ ವಾಹನವನ್ನು ಕಳವು ಮಾಡಿರುವುದಾಗಿ ತಪ್ಪು ಒಪ್ಪಿಕೊಂಡಿರುತ್ತಾನೆ. ಹಾಗೂ ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿಯೂ ದ್ವಿಚಕ್ರ ವಾಹನಗಳನ್ನು ಕಳೆವು ಮಾಡಿರುವುದಾಗಿ ತಿಳಿಸಿರುತ್ತಾನೆ.
ಪೊಲೀಸ್ ಅಭಿರಕ್ಷೆಗೆ ಪಡೆದುಕೊಂಡ ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಲಾಗಿ, ಕಳವು ಮಾಡಿದ ದ್ವಿಚಕ್ರವಾಹನಗಳನ್ನು ಆಂಧ್ರಪ್ರದೇಶದ ತಿರುಪತಿಯಲ್ಲಿ ವಾಸವಿರುವ ಓರ್ವ ವ್ಯಕ್ತಿ ಹಾಗೂ ಮದನಪಲ್ಲಿಯಲ್ಲಿ ವಾಸವಿರುವ ಇಬ್ಬರು ವ್ಯಕ್ತಿಗಳಿಗೆ ಮಾರಾಟ ಮಾಡಿರುವುದಾಗಿ ತಿಳಿಸಿರುತ್ತಾನೆ.
ತನಿಖೆಯನ್ನು ಮುಂದುವರಿಸಿ ತಿರುಪತಿಯಲ್ಲಿ ವಾಸವಿರುವ ಓರ್ವ ವ್ಯಕ್ತಿ ಹಾಗೂ ಮದನಪಲ್ಲಿಯಲ್ಲಿ ವಾಸವಿರುವ ಇಬ್ಬರು ವ್ಯಕ್ತಿಗಳಿಂದ 30 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಯಿತು.
ಈ ಪ್ರಕರಣದ ಆರೋಪಿಯ ವಶದಿಂದ ಒಟ್ಟು 31-ದ್ವಿಚಕ್ರವಾಹನಗಳನ್ನು ವಶ ಮೌಲ್ಯ ವಶಪಡೆಸಿಕೊಳ್ಳಲಾಯಿತು. ಇವುಗಳ ಒಟ್ಟು ಮೌಲ್ಯ 31,00,000/-(ಮೂವತ್ತೊಂದು ಲಕ್ಷ ರೂಪಾಯಿ).
ಪ್ರಕರಣದ ಆರೋಪಿ ಬಂಧನದಿಂದ 1) ಕೆ ಆರ್ ಪುರ ಪೊಲೀಸ್ ಠಾಣೆಯ-6 ದ್ವಿಚಕ್ರವಾಹನ ಕಳವು ಪ್ರಕರಣ,2) ಅವಲಹಳ್ಳಿ ಪೊಲೀಸ್ ಠಾಣೆಯ-1 ದ್ವಿಚಕ್ರವಾಹನ ಕಳವು ಪ್ರಕರಣ, 3) ಕಾಡುಗೋಡಿ ಪೊಲೀಸ್ ಠಾಣೆಯ-1 ದ್ವಿಚಕ್ರವಾಹನ ಕಳವು ಪ್ರಕರಣ,4) ಚಿಕ್ಕಬಳ್ಳಾಪುರ ಪೊಲೀಸ್ ಠಾಣೆಯ -1 ದ್ವಿಚಕ್ರವಾಹನ ಕಳವು ಪ್ರಕರಣ, ಸೇರಿದಂತೆ ಒಟ್ಟು 9 ದ್ವಿಚಕ್ರವಾಹನ ಕಳುವ ಪ್ರಕರಣಗಳು ಪತ್ತೆಯಾಗಿರುತ್ತವೆ. ಉಳಿದ 22 ದ್ವಿಚಕ್ರ ವಾಹನಗಳ ಮಾಲೀಕರ ಪತ್ತೆ ಕಾರ್ಯ ಮುಂದುವರೆದಿದೆ. ತನಿಖೆ ಪ್ರಗತಿಯಲ್ಲಿದೆ.
ಈ ಕಾರ್ಯಾಚರಣೆಯನ್ನು ಉಪ ಪೊಲೀಸ್ ಆಯುಕ್ತರು ವೈಟ್ಫೀಲ್ಡ್ ಶ್ರೀ ಕೆ. ಪರಶುರಾಮ್, ಐಪಿಎಸ್, ಸಹಾಯಕ ಪೊಲೀಸ್ ಆಯುಕ್ತರು, ವೈಟ್ ಫೀಲ್ಡ್ ಉಪ-ವಿಭಾಗ ಶ್ರೀಮತಿ ರಿನಾ ಸುವರ್ಣ ರವರ ಮಾರ್ಗದರ್ಶನದಲ್ಲಿ, ಕೆ. ಆರ್ ಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ ರಾಮಮೂರ್ತಿ. ಬಿಹಾಗೂ ಇತರೆ ಅಧಿಕಾರಿ ಮತ್ತು ಸಿಬ್ಬಂದಿರವರ ತಂಡ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ವರದಿ
ಶಶಿಕುಮಾರ್ ವಿ









