ಕೆ.ಆರ್ ಪುರ ಪೊಲೀಸ್ ಠಾಣಾ ಸರಹದ್ದಿನ ಶ್ರೀ. ಕೋಟೆ ವೆಂಕಟರಮಣಸ್ವಾಮಿ ದೇವಸ್ಥಾನದ ಪಕ್ಕದ ಮನೆಯಲ್ಲಿ ವಾಸವಿರುವ ದೇವಸ್ಥಾನದ ಅರ್ಚಕರಾದ ಪಿರಾದುದಾರರು ದಿನಾಂಕ:29/11/2024 ರಂದು ಕೆ.ಆರ್ ಪುರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಏರಾದುದಾರರು ದಿನಾಂಕ:28/11/2024 ರಂದು ರಾತ್ರಿ ದೇವಸ್ಥಾನದ ಬಾಗಿಲಿನ್ನು ಲಾಕ್ ಮಾಡಿಕೊಂಡು ದೇವಸ್ಥಾನದ ಪಕ್ಕದಲ್ಲಿರುವ ಪಿರಾದುದಾರರ ವಾಸದ ಮನೆಗೆ ಹೋಗಿರುತ್ತಾರೆ. ದಿನಾಂಕ:29/11/2024 ರಂದು ಬೆಳಗ್ಗೆ ಬಂದು ನೋಡಲಾಗಿ ದೇವಸ್ಥಾನದ ಬಾಗಿಲಿನ ಬೀಗವನ್ನು ಯೊರೋ ಅಪರಿಚಿತರು ಹೊಡೆದು, ದೇವಸ್ಥಾನದ ಒಳಗೆ ಇದ್ದ ಹುಂಡಿಯನ್ನು ಸಹ ಹೊಡೆದು ಅದರಲ್ಲಿದ್ದ ಹಣವನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಕೆ.ಆರ್ ಪುರ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:08/12/2024 ರಂದು ಆಂಧ್ರಪ್ರದೇಶದ ಗೋರಂಟಾ ಎಂಬಲ್ಲಿ ಮೂವರು ವ್ಯಕ್ತಿಗಳನ್ನು 2 ದ್ವಿ-ಚಕ್ರ ವಾಹನ ಸಮೇತ ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಲಾಗಿ, ಈ ಪ್ರಕರಣದಲ್ಲಿ ಕಳವು ಮಾಡಿರುವುದಾಗಿ ತಪ್ಪಿಪ್ಪಿಕೊಂಡಿರುತ್ತಾರೆ. ಹಾಗೂ ಮತ್ತೋರ್ವ ಸಹಚರನ ಬಗ್ಗೆ ಮಾಹಿತಿಯನ್ನು ನೀಡಿರುತ್ತಾರೆ. ಆರೋಪಿಗಳು ಬೆಂಗಳೂರು ಮತ್ತು ರಾಜ್ಯದ ವಿವಿಧ ಕಡೆಗಳಲ್ಲಿ ಕಳವು ಮಾಡಿರುವುದಾಗಿ ತಿಳಿಸಿರುತ್ತಾರೆ.

ದಿನಾಂಕ:09/12/2024 ರಂದು ಮೂವರು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 6 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.
ಪೊಲೀಸ್ ಅಭಿರಕ್ಷೆಗೆ ಪಡೆದ ಮೂವರು ಆರೋಪಿಗಳನ್ನು ಸುದೀರ್ಘವಾಗಿ ವಿಚಾರಣೆ ಮಾಡಲಾಗಿ, ಹೊಸಕೋಟೆ- ಚಿಂತಾಮಣಿ ಹೈವೆ ರಸ್ತೆಯಲ್ಲಿರುವ ಒಂದು ಖಾಲಿ ಜಾಗದಲ್ಲಿ ಕಳವು ಮಾಡಿದ 2 ದ್ವಿ-ಚಕ್ರ ವಾಹನವನ್ನು ನಿಲ್ಲಿಸಿರುವುದಾಗಿ ತಿಳಿಸಿರುತ್ತಾರೆ. ದಿನಾಂಕ:13/12/2024 ರಂದು 2 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಯಿತು. ದ್ವಿ-ಚಕ್ರ ವಾಹನವನ್ನು ಪರಿಶೀಲಿಸಿದಾಗ ಡಿಕ್ಕಿಯಲ್ಲಿಟ್ಟಿದ್ದ 31.63 ಲಕ್ಷ ನಗದನ್ನು ವಶಕ್ಕೆ ಪಡೆದುಕೊಳ್ಳಲಾಯಿತು.
ಈ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯು ತಲೆಮರೆಸಿಕೊಂಡಿದ್ದು, ಆತನ ಪತ್ತೆಕಾರ್ಯ ಮುಂದುವರೆದಿದೆ.
ಈ ಪ್ರಕರಣದ ಆರೋಪಿಗಳ ವಶದಿಂದ 4 ದ್ವಿ-ಚಕ್ರ ವಾಹನಗಳು ಮತ್ತು 3 163 ಲಕ್ಷ ನಗದನ್ನು ವಶಪಡಿಸಿಕೊಳ್ಳಲಾಯಿತು. ಒಟ್ಟು ಮೌಲ್ಯ 4,63,000/-(ನಾಲ್ಕು ಲಕ್ಷದ ಆರವತ್ತಮೂರು ಸಾವಿರ ರೂಪಾಯಿ).

ಈ ಪ್ರಕರಣದ ಆರೋಪಿಗಳ ಬಂಧನದಿಂದ ಕಗ್ಗಲಿಪುರ ಪೊಲೀಸ್ ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ ಪತ್ತೆಯಾಗಿದ್ದು, ಉಳಿದ 3 ದ್ವಿ-ಚಕ್ರ ವಾಹನಗಳ ಮಾಲೀಕರು ಪತ್ತೆಯಾಗಬೇಕಾಗಿರುತ್ತದೆ.
ದಿನಾಂಕ:14/12/2024 ರಂದು ಮೂವರು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ, ಮಾನ್ಯ ನ್ಯಾಯಾಲಯವು ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.
ಈ ಕಾರ್ಯಾಚರಣೆಯನ್ನು ಉಪ ಪೊಲೀಸ್ ಆಯುಕ್ತರು ವೈಟ್ ಫೀಲ್ಡ್ ಡಾ.ಶಿವಕುಮಾರ್ ಗುಣಾರೇ, ಐಪಿಎಸ್ ಸಹಾಯಕ ಪೊಲೀಸ್‌ಆಯುಕ್ತರು, ವೈಟ್ ಫೀಲ್ಡ್ ಉಪ ವಿಭಾಗ ಶ್ರೀಮತಿ ರೀನಾಸುವರ್ಣರವರ ಮಾರ್ಗದರ್ಶನದಲ್ಲಿ ಕೆ.ಆರ್.ಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ.ರಾಮಮೂರ್ತಿ.ಬಿಹಾಗೂ ಅಧಿಕಾರಿ/ಸಿಬ್ಬಂದಿರವರು ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.









