ಸಂಜಯ್ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಭೂಪಸಂದ್ರದ ರೈಲ್ವೇ ಪ್ಯಾರಲಲ್ ರಸ್ತೆಯ ಬಳಿ ನಿಷೇಧಿತ ಹೈಡೋ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ.
ಮೊದಲ ಹಂತದ ಕಾರ್ಯಾಚರಣೆಯಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು, ಅವರ ವಿಚಾರಣೆ ಮೇರೆಗೆ ಅದೇ ದಿನ ರಾತ್ರಿ ಮತ್ತೊಬ್ಬ ಸಹಚರನನ್ನು ಅವಲಹಳ್ಳಿಯ ಮಂಡೂರು ಬಳಿ ಬಂಧಿಸಿದ್ದಾರೆ.ಈ ಮೂವರು ಆರೋಪಿಗಳನ್ನು ಬಂಧಿಸಿ, ವಿಚಾರಣೆ ನಡೆಸಿದಾಗ ಕೇರಳ ರಾಜ್ಯದಿಂದ ಕಡಿಮೆ ಬೆಲೆಗೆ ಗಾಂಜಾ ಖರೀದಿಸಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಜಾಲ ಬೆಳಕಿಗೆ ಬಂದಿದೆ.
ಬಂಧಿತ ಆರೋಪಿಗಳಿಂದ ಒಟ್ಟು 1 ಕೆ.ಜಿ 50 ಗ್ರಾಂ ತೂಕದ ಹೈಡೋ ಗಾಂಜಾ ವಶಪಡಿಸಿಕೊಳ್ಳಲಾಗಿದೆ.ಕೃತ್ಯಕ್ಕೆ ಬಳಸಿದ್ದ ಒಂದು ಕಾರು, ₹ 500 ನಗದು, ಹಾಗೂ ತೂಕದ ಯಂತ್ರವನ್ನೂ ವಶಕ್ಕೆ ಪಡೆಯಲಾಗಿದೆ.ವಶಪಡಿಸಿಕೊಂಡ ಒಟ್ಟು ವಸ್ತುಗಳ ಮೌಲ್ಯ ಸುಮಾರು 1 ಕೋಟಿ 50 ಸಾವಿರಎಂದು ಅಂದಾಜಿಸಲಾಗಿದೆ.
ಈ ಪ್ರಕರಣದ ಕಾರ್ಯಾಚರಣೆಯನ್ನು ಶ್ರೀ.ಬಿ.ಎಸ್.ನೇಮಗೌಡ ಐ.ಪಿ.ಎಸ್, ಉಪ ಪೊಲೀಸ್ ಆಯುಕ್ತರು, ಉತ್ತರ ವಿಭಾಗ, ಶ್ರೀ.ತನ್ನೀರ್. ಕೆ.ಎಸ್, ಸಹಾಯಕ ಪೊಲೀಸ್ ಆಯುಕ್ತರು, ಜೆ.ಸಿ.ನಗರ ಉಪ ವಿಭಾಗ ರವರ ಮಾರ್ಗದರ್ಶನದಲ್ಲಿ ಹೆಬ್ಬಾಳ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ. ಬೈರ (ಪ್ರಭಾರ ಸಂಜಯ್ನಗರ ಪೊಲೀಸ್ ಠಾಣೆ) ಹಾಗೂ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.







