ಬೆಂಗಳೂರು ನಗರ ಉತ್ತರ ವಿಭಾಗದ ಒಟ್ಟು 13 ಪೊಲೀಸ್ ಠಾಣಾ ಸರಹದ್ದುಗಳಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ವಿಶೇಷ ಕಾರ್ಯಚರಣೆ ನಡೆಸಿ, ಎಲ್ಲಾ ಪೊಲೀಸ್ ಠಾಣಾ ಸರಹದ್ದುಗಳಲ್ಲಿನ ಮಾದಕ ವಸ್ತು ಮಾರಾಟ ಮಾಡುವವರ ವಿರುದ್ಧ ಮತ್ತು ಸ್ವತ್ತು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹಾಗೂ ಆ ವೇಳೆಯಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಗಳನ್ನು ಅನಿರೀಕ್ಷಿತವಾಗಿ ಪರಿಶೀಲನೆ ಕೈಗೊಂಡು 180 ವ್ಯಕ್ತಿಗಳನ್ನು ಪರಿಶೀಲಿಸಿ, ಸದರಿ ವ್ಯಕ್ತಿಗಳ ಚಲನವಲನ, ಪ್ರಸ್ತುತ ನಿರ್ವಹಿಸುತ್ತಿರುವ ಕೆಲಸದ ಬಗ್ಗೆ ಮಾಹಿತಿ ಕಲೆ ಹಾಕಿ ಸದರಿಯವರ ವಿರುದ್ಧ ಈ ಹಿಂದೆ ದಾಖಲಾಗಿರುವ ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಾರೆಂಟ್, ಪ್ರಮೋಷನ್ ಆಗಿರುವ ಬಗ್ಗೆ ಪರಿಶೀಲನೆ ಮಾಡಿ ನ್ಯಾಯಾಲಯದ ವಿಚಾರಣೆ ವೇಳೆ ತಪ್ಪದೇ ಹಾಜರಾಗಲು ಸೂಚಿಸಿರುತ್ತಾರೆ.
ಮಾದಕ ವಸ್ತು ಮಾರಾಟ ಮಾಡುವವರ ವಿರುದ್ಧ ಮೂರು ಪ್ರಕರಣಗಳನ್ನು ದಾಖಲಿಸಿದ್ದು ಮೂವರ ವ್ಯಕ್ತಿಗಳನ್ನು ವಶಕ್ಕೆ ಪಡೆದು ಎರಡು ಕೆಜಿ ನಾನು ರೈವತ್ತು ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಯಿತು.
(ಮಲ್ಲೇಶ್ವರಂ ಆರ್ ಟಿ ನಗರ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಗಳಲ್ಲಿ) ಅಲ್ಲದೆ ವಾದಕ ವಸ್ತು ಸೇನೆ ಮಾಡುತ್ತಿದ್ದ 4 ವಿರುದ್ಧ ಪ್ರಕರಣ ವನ್ನು ದಾಖಲಿಸಲಾಯಿತು
ಇವರು ಘೋಷಿತ ಅಪರಾಧಿ ವ್ಯಕ್ತಿಗಳನ್ನು ಮತ್ತು ಇಬ್ಬರು ವಾರೆಂಟ ಅಪರಾಧಿತರನ್ನು ಪತ್ತೆ ಮಾಡಿ ಅವರುಗಳ ವಿರುದ್ಧ ಪ್ರಕರಣ ದಾಖಲಿಸಿ 10 ವ್ಯಕ್ತಿಗಳ ವಿರುದ್ಧ ಪ್ರಕರಣವನ್ನು ದಾಖಲಿಸಲಾಯಿತು.
ಕೆ ಪಿ ಆಕ್ಟ್ ಅಡಿಯಲ್ಲಿ 18 ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಂಡು ಹಾಗೂ ಕೊಪ್ಟ ಕಾಯ್ದೆ ಇಡಿ 10 ವ್ಯಕ್ತಿಗಳ ವಿರುದ್ಧ ಪ್ರಕರಣವನ್ನು ದಾಖಲಿಸಲಾಯಿತು
ಉಳಿದ ವ್ಯಕ್ತಿಗಳಿಗೆ ಯಾವುದೇ ರೀತಿಯ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಕಟ್ಟುನಿಟ್ಟಿನ ಸೂಕ್ತ ಎಚ್ಚರಿಕೆಯನ್ನು ಪೊಲೀಸರು ನೀಡಿದರು
ಈ ಕಾರ್ಯಾಚರಣೆಯನ್ನು ಮಾನ್ಯ ಪೊಲೀಸ್ ಆಯುಕ್ತರು ಬೆಂಗಳೂರು ನಗರ ಮಾನ್ಯ ಜಂಟಿ ಪೊಲೀಸ್ ಆಯುಕ್ತರು ಪಶ್ಚಿಮ ಬೆಂಗಳೂರು ನಗರ ರವರುಗಳ ಮಾರ್ಗದರ್ಶನದಲ್ಲಿ ಬಿ ಎಸ್ ನೇಮ ಗೌಡ ಐಪಿಎಸ್, ಉಪಪೊ ಪೊಲೀಸ್ ಆಯುಕ್ತರು ಉತ್ತರ ವಿಭಾಗ ರವರ ನೇತೃತ್ವದಲ್ಲಿ ಮೂರು ಉಪ ವಿಭಾಗ ಸಹಾಯಕ ಪೊಲೀಸ್ ಆಯುಕ್ತರುಗಳು, 13 ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ಗಳು, ಮತ್ತು ಅಧಿಕಾರಿ ಸಿಬ್ಬಂದಿಗಳು ಈ ವಿಶೇಷ ಕಾರ್ಯಾಚರಣೆಯನ್ನು ಹಮ್ಮಿಕೊಂಡಿದ್ದರು.
ವರದಿ
ಶಶಿಕುಮಾರ್ ವಿ









