1 ಕೆಜಿ 825 ಗ್ರಾಂ ಗಾಂಜಾ, 1 ಮೊಬೈಲ್ ಫೋನ್, 1 ದ್ವಿ-ಚಕ್ರ ವಾಹನ ವಶ, ಮೌಲ್ಯ 1.50 ಲಕ್ಷ.
ಸುದ್ದಗುಂಟೆ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ದಿನಾಂಕ:24/01/2025 ರಂದು ಬಾತ್ಮೀದಾರರಿಂದ ಖಚಿತ ಮಾಹಿತಿಯೊಂದು ದೊರೆತಿರುತ್ತದೆ. ಮಾಹಿತಿಯಲ್ಲಿ ಪೊಲೀಸ್ ಠಾಣಾ ಸರಹದ್ದಿನ ಭವಾನಿ ನಗರದ 4ನೇ ಕ್ರಾಸ್‌ನಲ್ಲಿ ಓರ್ವ ವ್ಯಕ್ತಿಯು ನಿಷೇದಿತ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿಯಲ್ಲಿ ತಿಳಿಸಿರುತ್ತಾರೆ. ಈ ಮಾಹಿತಿಯನ್ನು ಆದರಿಸಿ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು, ಬಾತ್ಮೀದಾರರು ತಿಳಿಸಿದ ಸ್ಥಳದ ಮೇಲೆ ದಾಳಿ ಮಾಡಿ, ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆ ಮಾಡಲಾಗಿ, ಕಂಟೋನೆಂಟ್ ರೈಲ್ವೆ ನಿಲ್ದಾಣದ ಬಳಿ ಓರ್ವ ಅಪರಿಚಿತ ವ್ಯಕ್ತಿಯಿಂದ ನಿಷೇದಿತ ಮಾದಕ ವಸ್ತು ಗಾಂಜಾವನ್ನು ಕಡಿಮೆ ಬೆಲೆಗೆ ಖರೀದಿ ಮಾಡಿಕೊಂಡು ಬಂದು, ಹೆಚ್ಚಿನ ಬೆಲೆಗೆ ಮಾರಾಟ ಮಾಡಿ, ಅಧಿಕ ಲಾಭ ಗಳಿಸುವ ಉದ್ದೇಶದಿಂದ ಈ ಕೃತ್ಯವೆಸಗಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ.
ಆರೋಪಿತನ ವಶದಲ್ಲಿದ್ದ 1 ಕೆ.ಜಿ 825 ಗ್ರಾಂ ನಿಷೇದಿತ ಮಾದಕ ವಸ್ತು ಗಾಂಜಾ, 1 ಮೊಬೈಲ್ ಫೋನ್ ಹಾಗೂ 1 ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಮೌಲ್ಯ 71,15,000/-(ಒಂದು ಲಕ್ಷದ ಹದಿನೈದು ಸಾವಿರ ರೂಪಾಯಿ).
ದಿನಾಂಕ:25/01/2025 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 4 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.

ಪೊಲೀಸ್ ಅಭಿರಕ್ಷೆಗೆ ಪಡೆದ ಆರೋಪಿಯನ್ನು ವಿಚಾರಣೆ ಮಾಡಲಾಗಿ, ಈ ಪ್ರಕರಣದಲ್ಲಿ ಮತ್ತೋರ್ವ ವ್ಯಕ್ತಿಯು ಭಾಗಿಯಾಗಿರುವುದಾಗಿ ತಿಳಿಸಿರುತ್ತಾನೆ.
ದಿನಾಂಕ:28/01/2025 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.
ಪ್ರಮುಖ ಆರೋಪಿಯು ವಶದಲ್ಲಿದ್ದಾಗ ನೀಡಿದ್ದ ಮಾಹಿತಿ ಮೇರೆಗೆ, ದಿನಾಂಕ:04/02/2025 ರಂದು ನ್ಯೂ ಗುರಪ್ಪನಪಾಳ್ಯ ಬಿ.ಟಿ.ಎಂ 1ನೇ ಹಂತದಲ್ಲಿ ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆ ಮಾಡಲಾಗಿ ಈ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ.
ದಿನಾಂಕ:05/02/2025 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.
ಬೆಂಗಳೂರು ನಗರ ಆಗ್ನೆಯ ವಿಭಾಗದ ಉಪ ಪೊಲೀಸ್ ಆಯುಕ್ತರವರಾದ ಶ್ರೀಮತಿ, ಸಾರಾ ಫಾತೀಮಾ, ಐ.ಪಿ.ಎಸ್ ರವರ ನಿರ್ದೇಶನದಲ್ಲಿ ಶ್ರೀ. ಶಿವಶಂಕರ ರೆಡ್ಡಿ, ಸಹಾಯಕ ಪೊಲೀಸ್ ಕಮೀಷನರ್, ಮೈಕೋಲೇಔಟ್ ಉಪ ವಿಭಾಗ ರವರ ಮಾರ್ಗದರ್ಶನದಲ್ಲಿ ಶ್ರೀ. ರಮೇಶ್ ಬಿ. ಛಾಯಗೋಳ ಪೊಲೀಸ್ ಇನ್ಸ್‌ಪೆಕ್ಟರ್ ರವರ ನೇತೃತ್ವದ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.









