ಮೈಕೋಲೇಔಟ್ ಪೊಲೀಸ್ ಠಾಣಾ ಸರಹದ್ದಿನ ಬಿಳೇಕಳ್ಳಿಯಲ್ಲಿರುವ ಅಪಾರ್ಟ್ ಮೆಂಟ್ವೊಂದರಲ್ಲಿ ವಾಸವಿರುವ ಪಿರಾದುದಾರರು, ದಿನಾಂಕ:08/08/2024 ರಂದು ಮೈಕೋಲೇಔಟ್ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ದಿನಾಂಕ:06/08/2024 ರಂದು ಮಧ್ಯಾಹ್ನ ಅಪಾರ್ಟ್ ಮೆಂಟ್ ಮುಂದೆ ಪಿರಾದುದಾರರು ದ್ವಿ-ಚಕ್ರ ವಾಹನವನ್ನು ಲಾಕ್ ಮಾಡಿ, ಕೀಯನ್ನು ಅಲ್ಲಿ ಬಿಟ್ಟು ಹೋಗಿರುತ್ತಾರೆ. ವಾಪಸ್ ಬಂದು ದ್ವಿ-ಚಕ್ರ ವಾಹನವನ್ನು ನೋಡಲಾಗಿ, ಯಾರೋ ಅಪರಿಚಿತರು ದ್ವಿ-ಚಕ್ರ ವಾಹನವನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಮೈಕೋಲೇಔಟ್ ಪೊಲೀಸ್ ಠಾಣೆಯಲ್ಲಿ ದ್ವಿ-ಚಕ್ರ ವಾಹನ ಕಳವು ಪ್ರಕರಣ ದಾಖಲಾಗಿರುತ್ತದೆ. ಹಾಗೂ ಇದೇ ರೀತಿಯ ಮತ್ತೆರಡು ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು ಸಹ ಇದೇ ಅವದಿಯಲ್ಲಿ ದಾಖಲಾಗಿರುತ್ತವೆ.
ಈ ಮೂರು ಪ್ರಕರಣಗಳ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:27/10/2024 ರಂದು ಬನ್ನೇರುಘಟ್ಟ ಮುಖ್ಯರಸ್ತೆಯ ವೇಗಾಸಿಟಿ ಮಾಲ್ ಹಿಂಭಾಗದಲ್ಲಿ ಈ ಪ್ರಕರಣದಲ್ಲಿ ಕಳುವಾಗಿದ್ದ ಒಂದು ದ್ವಿ-ಚಕ್ರ ವಾಹನ ಸಮೇತ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಗಳನ್ನು ವಿಚಾರಣೆ ಮಾಡಲಾಗಿ, ಈ ಪ್ರಕರಣದಲ್ಲಿ ದ್ವಿ-ಚಕ್ರ ವಾಹನವನ್ನು ಕಳವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾರೆ ಹಾಗೂ ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿ ದ್ವಿ-ಚಕ್ರ ವಾಹನಗಳನ್ನು ಕಳವು ಮಾಡಿರುವುದಾಗಿ ತಿಳಿಸಿರುತ್ತಾರೆ.
ದಿನಾಂಕ:28/10/2024 ರಂದು ಬೆಳಿಗ್ಗೆ ಠಾಣೆಯ ಮತ್ತೊಂದು ಪ್ರಕರಣದಲ್ಲಿ ಕಳುವಾಗಿದ್ದ ಒಂದು ದ್ವಿ-ಚಕ್ರ ವಾಹನ ಸಮೇತ ಇಬ್ಬರು ವ್ಯಕ್ತಿಗಳನ್ನು ಬಿ.ಟಿ.ಎಂ ಲೇಔಟ್ನ ಸೋಮೇಶ್ವರ ಕಾಲೋನಿಯಲ್ಲಿ ವಶಕ್ಕೆ ಪಡೆದಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಗಳನ್ನು ವಿಚಾರಣೆ ಮಾಡಲಾಗಿ, ಪ್ರಕರಣದಲ್ಲಿ ದ್ವಿ-ಚಕ್ರ ವಾಹನವನ್ನು ಕಳವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾರೆ ಹಾಗೂ ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿ ದ್ವಿ-ಚಕ್ರ ವಾಹನಗಳನ್ನು ಕಳವು
ಮಾಡಿರುವುದಾಗಿ ತಿಳಿಸಿರುತ್ತಾರೆ.
ದಿನಾಂಕ:28/10/2024 ರಂದು ನಾಲ್ವರು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 8 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.

ದಿನಾಂಕ:28/10/2024 ರಂದು ದೇವರಚಿಕ್ಕನಹಳ್ಳಿಯ ಮುಖ್ಯರಸ್ತೆಯಲ್ಲಿ ಇಬ್ಬರು ವ್ಯಕ್ತಿಗಳನ್ನು ಠಾಣೆಯ ಮತ್ತೊಂದು ಪ್ರಕರಣದಲ್ಲಿ ಕಳುವಾಗಿದ್ದ ಒಂದು ದ್ವಿ-ಚಕ್ರ ವಾಹನ ಸಮೇತ ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಗಳನ್ನು ವಿಚಾರಣೆ ಮಾಡಲಾಗಿ, ಪ್ರಕರಣದಲ್ಲಿ ದ್ವಿ-ಚಕ್ರ ವಾಹನವನ್ನು ಕಳವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾರೆ ಹಾಗೂ ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿ ದ್ವಿ-ಚಕ್ರ ವಾಹನಗಳನ್ನು ಕಳವು ಮಾಡಿರುವುದಾಗಿ ತಿಳಿಸಿರುತ್ತಾರೆ.
ದಿನಾಂಕ:29/10/2024 ರಂದು ವಶಕ್ಕೆ ಪಡೆದ ಇಬ್ಬರು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 7 ದಿನಗಳ ಕಾಲ ಪೊಲೀಸ್’ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.
ಪೊಲೀಸ್ ಅಭಿರಕ್ಷೆಗೆ ಪಡೆದ ಮೇಲೆ ತಿಳಿಸಿದ ಆರು ಆರೋಪಿಗಳನ್ನು ಸುದೀರ್ಘವಾಗಿ ವಿಚಾರಣೆ ಮಾಡಲಾಗಿ, ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿ ಕಳವು ಮಾಡಿದ ದ್ವಿ-ಚಕ್ರ ವಾಹನಗಳನ್ನು ಮೈಕೋ ಲೇಔಟ್ ಪೊಲೀಸ್ ಠಾಣಾ ಸರಹದ್ದಿನ ವಿವಿಧ ಕಡೆಗಳಲ್ಲಿ ನಿಲ್ಲಿಸಿರುವುದಾಗಿ ತಿಳಿಸಿರುತ್ತಾರೆ.

ದಿನಾಂಕ:29/10/2024 ರಂದು ಎಸ್.ಎನ್.ಎನ್ ರಾಜ್ಕ್ ಅಪಾರ್ಟ್ ಮೆಂಟ್ ವೊಂದರ ಪಕ್ಕದ ಖಾಲಿ ಜಾಗದಲ್ಲಿ ಕಳವು ಮಾಡಿ ನಿಲ್ಲಿಸಿದ್ದ 7 ದ್ವಿ-ಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಯಿತು.
ದಿನಾಂಕ:29/10/2024 ರಂದು ಇಡಬ್ಲ್ಯೂಎಸ್ ಕಾಲೋನಿ, ಎಂ.ಇ.ಎಸ್ ಸ್ಕೂಲ್ ಪಕ್ಕದ ಖಾಲಿ ಜಾಗದಲ್ಲಿ ಕಳವು ಮಾಡಿ ನಿಲ್ಲಿಸಿದ್ದ 3 ದ್ವಿ-ಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಯಿತು.
ದಿನಾಂಕ:29/10/2024 ರಂದು ಸೋಮೇಶ್ವರ ಕಾಲೋನಿಯ ಬ್ರಿಡ್ಜ್ ಬಳಿ ಪಕ್ಕದ ಖಾಲಿ ಜಾಗದಲ್ಲಿ ಕಳವು ಮಾಡಿ ನಿಲ್ಲಿಸಿದ್ದ 5 ದ್ವಿ-ಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಯಿತು.
ದಿನಾಂಕ:30/10/2024 ರಂದು ದೇವರ ಚಿಕ್ಕನಹಳ್ಳಿ ಮುಖ್ಯರಸ್ತೆಯ ಪಕ್ಕದ ಖಾಲಿ ಜಾಗದಲ್ಲಿ ಕಳವು ಮಾಡಿ ನಿಲ್ಲಿಸಿದ್ದ 7 ದ್ವಿ-ಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ಅದೇ ದಿನ ಮೈಕೋ ಲೇಔಟ್ ಪೊಲೀಸ್ ಠಾಣಾ ಸರಹದ್ದಿನ ಆರ್.ಟಿ.ಓ ಕಛೇರಿಯ ಬಳಿ ಕಳವು ಮಾಡಿ ನಿಲ್ಲಿಸಿದ್ದ 4 ದ್ವಿ-ಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಯಿತು.
ಒಟ್ಟಾರೆಯಾಗಿ ಈ ಪ್ರಕರಣದ ಆರೋಪಿಗಳ ಬಂಧನದಿಂದ 29 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಒಟ್ಟು ಮೌಲ್ಯ 11,60,000/-( ಹನ್ನೊಂದು ಲಕ್ಷದ ಆರವತ್ತು ಸಾವಿರ ರೂಪಾಯಿ).
ಈ ಪ್ರಕರಣದ ಆರೋಪಿಗಳ ಬಂಧನದಿಂದ 1) ಮೈಕೋಲೇಔಟ್ ಪೊ. ಠಾಣೆಯ-3 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು, 2) ಮಡಿವಾಳ ಪೆ. ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ 3) ಎಸ್.ಜೆ.ಪಾಳ್ಯ ಪೊ. ಠಾಣೆಯ ದ್ವಿ-ಚಕ್ರ ವಾಹನ ಕಳವು ಪ್ರಕರಣ 4) ತಿಲಕ್ನಗರ ಮೊ. ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ 5) ಜೆ.ಪಿ.ನಗರ ಮೊ. ಠಾಣೆಯ-2 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು 6) ತಲಘಟ್ಟಪುರ ಪೊ. ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ, 7) ಪುಟ್ಟೇನಹಳ್ಳಿ ಮೊ, ಠಾಣೆಯ-2 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು, 8) ಬೇಗೂರು ಪೊ, ಠಾಣೆಯ- ದ್ವಿ-ಚಕ್ರ ವಾಹನ ಕಳವು ಪ್ರಕರಣ, 9) ಹೆಚ್.ಎಸ್.ಆರ್ ಲೇಔಟ್ ಪೊ. ತಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ, 10) ಸಿಟಿಮಾರ್ಕೆಟ್ ಪೊ. ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ 11) ಎಸ್.ಜೆ.ಪಾರ್ಕ್ ಮೊ. ತಾಣೆಯ-I ದ್ವಿ-ಚಕ್ರ ವಾಹನ ಕಳವು ಪ್ರಕರಣ, 12) ಕಗ್ಗಲಿಪುರ ಪ್ರೊ. ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ, 13) ಸರ್ಜಾಪುರ ಪೊ. ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ ಸೇರಿದಂತೆ ಒಟ್ಟು 17 ದ್ವಿ-ಚಕ್ರ ವಾಹನ ಕಳವು ಪ್ರಕರಣ ಪತ್ತೆಯಾಗಿರುತ್ತವೆ. ಉಳಿದ 12 ದ್ವಿ-ಚಕ್ರ ವಾಹನಗಳ ಮಾಲೀಕರುಗಳ ಪತ್ತೆ ಕಾರ್ಯ ಮುಂದುವರೆದಿದೆ.
ದಿನಾಂಕ:30/10/2024 ರಂದು ಆರು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗಳೆಲ್ಲರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.
ಈ ಕಾರ್ಯಾಚರಣೆಯನ್ನು ಆಗ್ನೆಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ. ಸಾರಾ ಫಾತೀಮಾ, ಐಪಿಎಸ್ಹಾಗೂ ಮೈಕೋ ಲೇಔಟ್ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ. ಶಿವಶಂಕರ ರೆಡ್ಡಿ, ಬಿರವರ ಮಾರ್ಗದರ್ಶನದಲ್ಲಿ ಮೈಕೋ ಲೇಔಟ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ರವರಾದ ಶ್ರೀ. ಗಿರೀಶ್.ಎಂ.ಎಲ್ರವರ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.









