ನಿಷೇಧಿತ ಮಾದಕವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ವ್ಯಕ್ತಿಗಳ ಬಂಧನ.
7 ಕೆ.ಜಿ 310 ಗ್ರಾಂ ಗಾಂಜಾ ವಶ. ಮೌಲ್ಯ ಕ್ಷ 4.20 ಲಕ್ಷ.
ದಿನಾಂಕ:07/11/2024 ರಂದು ಮಡಿವಾಳ ಪೊಲೀಸ್ ಠಾಣಾಧಿಕಾರಿ ಹಾಗೂ ಸಿಬ್ಬಂದಿಯವರಿಗೆ, ಬಾತ್ಮೀದಾರರಿಂದ ಖಚಿತ ಮಾಹಿತಿಯೊಂದು ದೊರೆತ್ತಿರುತ್ತದೆ. ಮಾಹಿತಿಯಲ್ಲಿ ಠಾಣಾ ವ್ಯಾಪ್ತಿಯಲ್ಲಿರುವ ಸಿಲ್ಕ್ ಬೋರ್ಡ್ ಫೈ ಓವರ್ ಕೆಳಗೆ ವಾಹನಗಳನ್ನು ನಿಲ್ಲಿಸುವ ಸ್ಥಳದಲ್ಲಿ ಮೂವರು ಅಪರಿಚಿತ ವ್ಯಕ್ತಿಗಳು ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಬ್ಯಾಗ್ನಲ್ಲಿ ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುವ ಸಲುವಾಗಿ ಬಂದಿರುವುದಾಗಿ ಮಾಹಿತಿಯಲ್ಲಿ ತಿಳಿಸಿರುತ್ತಾರೆ.

ಈ ಮಾಹಿತಿಯನ್ನು ಆಧಾರಿಸಿ ಮಡಿವಾಳ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿಯಲ್ಲಿ ಪ್ರಕರಣವನ್ನು ದಾಖಲಿಸಿ, ನಂತರ ಬಾತ್ಮೀದಾರರು ತಿಳಿಸಿದ ಸ್ಥಳಕ್ಕೆ ಧಾವಿಸಿ, ಮೂವರು ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಗಳನ್ನು ವಿಚಾರಣೆ ಮಾಡಲಾಗಿ, ಒಡಿಸಾ ರಾಜ್ಯದಿಂದ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಕಡಿಮೆ ಬೆಲೆಗೆ ತಂದು ಹೆಚ್ಚಿನ ಲಾಭಕ್ಕಾಗಿ ಮಾರಾಟ ಮಾಡುತ್ತಿರುವುದಾಗಿ ತಿಳಿಸಿರುತ್ತಾರೆ. ಆರೋಪಿಗಳ ವಶದಲ್ಲಿದ್ದ 7 ಕೆ.ಜಿ 310 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಯಿತು. ಇದರ ಮೌಲ್ಯ 4,20,000/- (ನಾಲ್ಕು ಲಕ್ಷದ ಇಪ್ಪತ್ತು ಸಾವಿರ ರೂಪಾಯಿ).
ದಿನಾಂಕ:08/11/2024 ರಂದು ಮೂವರು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿಲಾಗಿ, ಮಾನ್ಯ ನ್ಯಾಯಾಲಯವು ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.

ಈ ಕಾರ್ಯಾಚರಣೆಯನ್ನು ಆತ್ಮೀಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀಮತಿ.ಸಾರಾ ಫಾತಿಮಾ, ರವರ ಮಾರ್ಗದರ್ಶನದಲ್ಲಿ, ಮಡಿವಾಳ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ಕೆ.ಸಿ.ಲಕ್ಷ್ಮೀನಾರಾಯಣ ರವರು ಮಡಿವಾಳ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ.ಮೊಹಮದ್.ಎಂ.ಎ ರವರ ನೇತೃತ್ವದ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.









