ಮಾಗಡಿ ಟೌನ್ ಕಲ್ಯಾ ಗೇಟ್ ಬಳಿ ಇರುವ ಫೈನಾನ್ಸ್ ಕಚೇರಿಯೊಂದರಲ್ಲಿ ದಿನಾಂಕ:12.01.2025 ರಂದು ಲಾಕರ್ ಹೊಡೆದು ಹಣ ಹಾಗೂ ಸಿಸಿಟಿವಿ ಕ್ಯಾಮೆರಾ ಮತ್ತು ಮಾನಿಟರ್ ಗಳನ್ನು ಕಳ್ಳತನ ಮಾಡಿರುವ ಬಗ್ಗೆ ಪಿರ್ಯಾದುದಾರರು ನೀಡಿದ ದೂರಿನ ಮೇರೆಗೆ ಮಾಗಡಿ ಪೊಲೀಸ್ ಠಾಣೆಯಲ್ಲಿ ಮೊ.ಸಂ 15/2025, ಕಲಂ 331(3), 331 (4), 305 ಬಿ.ಎನ್.ಎಸ್ ರೀತ್ಯಾ ಪ್ರಕರಣ ದಾಖಲಾಗಿರುತ್ತದೆ.
ಸದರಿ ಪ್ರಕರಣದ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಿ, ತನಿಖೆ ನಡೆಸಿ, ಆರೋಪಿಯ ಬಗ್ಗೆ ಮಾಹಿತಿ ಕಲೆ ಹಾಕಿ, ದಿನಾಂಕ:15.01.2025 ರಂದು ಓರ್ವ ಆರೋಪಿಯನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿ, ಕಳ್ಳತನ ಮಾಡಿದ್ದ ರೂ 5,40,594/- ನಗದು ಹಣ, 03 ಸಿಸಿಟಿವಿ ಕ್ಯಾಮೆರಾ ಹಾಗೂ 1 ಸಿಸಿಟಿವಿ ಮಾನಿಟರ್ ಅನ್ನು ಅಮಾನತ್ತು ಪಡಿಸಿಕೊಳ್ಳುವಲ್ಲಿ, ಮಾಗಡಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಯಶಸ್ವಿಯಾಗಿರುತ್ತಾರೆ.









