ಪೊಲೀಸರ ಕಾರ್ಯಾಚರಣೆಯಲ್ಲಿ ಒಟ್ಟು 447 ಗ್ರಾಂ ಚಿನ್ನಾಭರಣ, 28,250 ನಗದು, ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ವಶಪಡಿಸಿಕೊಂಡ ಒಟ್ಟು ಮಾಲಿನ ಮೌಲ್ಯ 70 ಲಕ್ಷ ಎಂದು ಅಂದಾಜಿಸಲಾಗಿದೆ.
ಈ ಐವರ ಬಂಧನದಿಂದ ಅವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಮನೆ ಕಳವು ಪ್ರಕರಣಗಳು ಪತ್ತೆಯಾಗಿವೆ.
ಈ ಕಾರ್ಯಾಚರಣೆಯನ್ನು ಉಪ ಪೊಲೀಸ್ ಆಯುಕ್ತರು ವೈಟ್ ಪೀಲ್ಡ್ ಶ್ರೀ. ಕೆ.ಪರಶುರಾಮ್, ಐಪಿಎಸ್, ಸಹಾಯಕ ಪೊಲೀಸ್ ಆಯುಕ್ತರು, ವೈಟ್ ಫೀಲ್ಡ್ ಉಪ ವಿಭಾಗ ಶ್ರೀಮತಿ ರೀನಾ ಸುವರ್ಣ ರವರ ಮಾರ್ಗದರ್ಶನದಲ್ಲಿ ಅವಲಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ ರಾಮಕೃಷ್ಣರೆಡ್ಡಿ ಹಾಗೂ ಇತರೆ ಅಧಿಕಾರಿ ಮತ್ತು ಸಿಬ್ಬಂದಿ ರವರ ತಂಡ ಪ್ರಕರಣವನ್ನು ಭೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.









