ತುಮಕೂರು ನಗರದ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರನ್ನೇ ಟಾರ್ಗೆಟ್ ಮಾಡಿ ನಿಷೇಧಿತ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಜಾಲವನ್ನು ತುಮಕೂರು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ.
ದಿನಾಂಕ 10/07/2026ರ ಸಂಜೆ 5 ಗಂಟೆಯ ಸುಮಾರಿಗೆ, ತಿಲಕ್‌ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯ ಶೇಷಾದ್ರಿಪುರಂ ಕಾಲೇಜು ರಸ್ತೆಯ ಬಳಿ ಬಿಳಿ ಬಣ್ಣದ ಫಾರ್ಚೂನರ್ ಕಾರಿನಲ್ಲಿ ಬಂದಿದ್ದ ಆರೋಪಿಗಳು, ಗಾಂಜಾ ಹಾಗೂ ಇನ್ನಿತರ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಸಿಕ್ಕ ಖಚಿತ ಮಾಹಿತಿ ಮೇರೆಗೆ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ತಿಲಕ್‌ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.
ಡ್ರಗ್ಸ್ ದಂಧೆಗೆ ಬ್ರೇಕ್ ಹಾಕಲು ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್.ಕೆ.ವಿ. (IPS) ರವರ ಮಾರ್ಗದರ್ಶನದಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ಸಿ.ಗೋಪಾಲ್ ಹಾಗೂ ಪುರುಷೋತ್ತಮ.ಎಂ.ಎಲ್.ತುಮಕೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಕೆ.ಆರ್.ಚಂದ್ರಶೇಖರ್.ದಿನಾಂಕ 11/07/2026 ರಂದು ತಿಲಕ್‌ಪಾರ್ಕ್ ವೃತ್ತದ ಸಿಪಿಐ ಎಫ್.ಕೆ.ನದಾಫ್, ಪಿಎಸ್‌ಐಗಳಾದ ಯೋಗೀಶ್ ಟಿ.ಕೆ ಹಾಗೂ ಲೋಕೇಶ್ ಬಾಬು ನೇತೃತ್ವದ ತಂಡ ಭರ್ಜರಿ ಕಾರ್ಯಾಚರಣೆ ನಡೆಸಿದೆ. ಅಪರಾಧ ಪತ್ತೆ ವಿಭಾಗದ ಸಿಬ್ಬಂದಿಗಳಾದ ರಾಮಕೃಷ್ಣ, ಶಶಿಕುಮಾರ್‌ನಾಯ್, ನಿಜಾಮುದ್ದೀನ್ ಷಾ, ನಾಸೀರ್ ಉದ್ದೀನ್, ಲೋಕೇಶ್, ಸುನೀಲ್ ಲಮಾಣಿ, ಪರಶುರಾಮ್ ಹೊಸಮನಿ, ಸುನೀಲ್ ಕುಮಾರ್ ಹಾಗೂ ಜೀಪ್ ಚಾಲಕರಾದ ಸತೀಶ್ ಮತ್ತು ಸಿದ್ದೇಶ್ ಅವರನ್ನೊಳಗೊಂಡ ವಿಶೇಷ ತಂಡವು ಆರು ಜನ ಆರೋಪಿಗಳನ್ನು ಮಾದಕ ವಸ್ತುಗಳ ಸಮೇತ ರೆಡ್‌ಹ್ಯಾಂಡ್ ಆಗಿ ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದೆ.
ಸದ್ಯ ಆರೋಪಿಗಳಿಂದ ಗಾಂಜಾ ಹಾಗೂ ಇನ್ನಿತರ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ತಿಲಕ್‌ಪಾರ್ಕ್ ಪೊಲೀಸರು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.









