ವೈಟ್‌ಫೀಲ್ಡ್ ಪೊಲೀಸರು ದ್ವಿ-ಚಕ್ರ ವಾಹನಗಳ ಕಳ್ಳತನದಲ್ಲಿ ತೊಡಗಿದ್ದ ಹೊರರಾಜ್ಯದ ಓರ್ವ ವ್ಯಕ್ತಿಯನ್ನು ಬಂಧಿಸಿದ್ದು, ಆತನಿಂದ 20 ಲಕ್ಷ ರೂಪಾಯಿ ಮೌಲ್ಯದ 20 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ವಿಜಯನಗರದ ನಿವಾಸಿಯೊಬ್ಬರ ದೂರಿನ ಪ್ರಕಾರ, ಐಟಿಪಿಎಲ್ ಹಿಂಭಾಗದ ಗೇಟ್‌ನಲ್ಲಿರುವ ಮಾಲ್‌ನ ಪುಟ್‌ಪಾತ್‌ನಲ್ಲಿ ನಿಲ್ಲಿಸಿದ್ದ ಅವರ ದ್ವಿ-ಚಕ್ರ ವಾಹನ ಕಳ್ಳತನವಾಗಿತ್ತು.

ಈ ದೂರಿನ ಮೇರೆಗೆ ಕೊಟುರುಗ್ರಾಮ, ಹೊಸಕೋಟೆಯಲ್ಲಿ ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆದರು. ವಿಚಾರಣೆ ವೇಳೆ, ಆರೋಪಿಯು ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ. ವೈಟ್‌ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ಇನ್ನೂ ಕೆಲವು ವಾಹನಗಳನ್ನು ಕಳವು ಮಾಡಿರುವುದಾಗಿ ಆತ ತಿಳಿಸಿದ್ದಾನೆ. ಈ ಬಂಧನದಿಂದ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ 12 ವಾಹನ ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ. ಉಳಿದ 8 ವಾಹನಗಳ ವಾರಸುದಾರರ ಪತ್ತೆಗಾಗಿ ತನಿಖೆ ಮುಂದುವರಿದಿದೆ.
ಈ ಕಾರ್ಯಾಚರಣೆಯು ವೈಟ್‌ಫೀಲ್ಡ್ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ. ಕೆ ಪರಶುರಾಮ್ ಐಪಿಎಸ್ ಮತ್ತು ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀಮತಿ ರೀನಾ ಸುವರ್ಣ ಅವರ ಮಾರ್ಗದರ್ಶನದಲ್ಲಿ, ಇನ್ಸ್‌ಪೆಕ್ಟರ್ ಶ್ರೀ. ಗುರುಪ್ರಸಾದ್ ಎ ಮತ್ತು ಸಿಬ್ಬಂದಿ ವರ್ಗದವರಿಂದ ನಡೆದಿದೆ.








