ಯಲಹಂಕ ಉಪನಗರ ಪೊಲೀಸ್ ಠಾಣಾ ಸರಹದ್ದಿನ ರಾಮಗೊಂಡನಹಳ್ಳಿ ಮುಖ್ಯರಸ್ತೆಯಲ್ಲಿ ವಾಸವಿರುವ ಪಿರಾದುದಾರರು, ದಿನಾಂಕ:13/03/2025 ರಂದು ಯಲಹಂಕ ಉಪನಗರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದರರು ದಿನಾಂಕ:12/03/2025 ರಂದು ಸಂಜೆ ಮನೆಗೆ ಬೀಗ ಹಾಕಿಕೊಂಡು ಊರಿಗೆ ಹೋಗಿರುತ್ತಾರೆ. ಮಾರನೆಯ ದಿನ ಬೆಳಿಗ್ಗೆ ವಾಪಸ್ ಬಂದು ನೋಡಲಾಗಿ, ಮನೆಯ ಮುಂಭಾಗಿಲಿನ ಬೀಗವನ್ನು ಹೊಡೆದು ಕೊಠಡಿಯ ಕಬೋಡ್ ನಲ್ಲಿಟ್ಟಿದ್ದ. 45 ಗ್ರಾಂ ಚಿನ್ನಾಭರಣ ಹಾಗೂ 6 ಲಕ್ಷ ನಗದನ್ನು ಯಾರೋ ಅಪರಿಚಿತರು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಯಲಹಂಕ ಉಪನಗರ ಪೊಲೀಸ್ ಠಾಣೆಯಲ್ಲಿ ಕನ್ನ ಕಳವು ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು. ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:24/03/2025 ರಂದು ಹಗರಿಬೊಮ್ಮನಹಳ್ಳಿ ಠಾಣಾ ಸರಹದ್ದಿನ ದುರ್ಗಮ್ಮ ದೇವಸ್ಥಾನದ ಬಳಿ ಇಬ್ಬರು ವ್ಯಕ್ತಿಗಳನ್ನು ಕೃತ್ಯಕ್ಕೆ ಬಳಸಿದ ಕಾರಿನ ಸಮೇತ ವಶಕ್ಕೆ ಪಡೆಯಲಾಯಿತು. ವಶಕ್ಕೆ ಪಡೆದ ವ್ಯಕ್ತಿಗಳಿಬ್ಬರನ್ನು ವಿಚಾರಣೆಗೊಳಪಡಿಸಿದಾಗ, ಈ ಪ್ರಕರಣದಲ್ಲಿ ಚಿನ್ನಾಭರಣ ಹಾಗೂ ನಗದನ್ನು ಕಳವು ಮಾಡಿದ ಮತ್ತೊರ್ವ ಸ್ನೇಹಿತನ ಬಗ್ಗೆ ಮಾಹಿತಿಯನ್ನು ನೀಡಿ, ತನ್ನೊಪ್ಪಿಕೊಂಡಿರುತ್ತಾರೆ.
ದಿನಾಂಕ:27/03/2025 ರಂದು ಆರೋಪಿಗಳಿಬ್ಬರನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 3 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆಯಲಾಯಿತು.
ಪೊಲೀಸ್ ಅಭಿರಕ್ಷೆಗೆ ಪಡೆದ ಆರೋಪಿಗಳಿಬ್ಬರನ್ನು ಸುದೀರ್ಘವಾಗಿ ವಿಚಾರಣೆ ಮಾಡಲಾಗಿ, ಆರೋಪಿಗಳಿಬ್ಬರು ದಿನಾಂಕ:12/03/2025 ರಂದು ಬೆಳಿಗ್ಗೆ ಹಗರಿಬೊಮ್ಮನಹಳ್ಳಿಯಿಂದ ಸ್ನೇಹಿತನ ಜೊತೆ ಬೆಂಗಳೂರಿಗೆ ಪ್ರವಾಸಕ್ಕೆಂದು ಬಂದಿರುತ್ತಾರೆ. ಬೆಂಗಳೂರಿಗೆ ಬಂದ ನಂತರ ಸ್ನೇಹಿತನು ಬೀಗ ಹಾಕಿರುವ ಮನೆಯನ್ನು ಗುರುತಿಸಿ. ಆ ಮನೆಯ ಬೀಗವನ್ನು ಹೊಡೆದು ಮನೆಯಲ್ಲಿರುವ ಚಿನ್ನಾಭರಣ, ನಗದು ಹಾಗೂ ಬೆಲೆಬಾಳುವ ವಸ್ತುಗಳನ್ನು ಕಳವು ಮಾಡೋಣವೆಂದು ತಿಳಿಸಿದ್ದು, ಅದೇ ಪ್ರಕಾರ ಈ ಕೃತ್ಯವೆಸಗಿರುವುದಾಗಿ ತಿಳಿಸಿರುತ್ತಾರೆ.
ದಿನಾಂಕ:29/03/2025 ರಂದು ಆರೋಪಿಗಳಿಬ್ಬರನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನಾಯ್ಯಾಲಯವು ಆರೋಪಿಗಳಿಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.
ತನಿಖೆಯನ್ನು ಮುಂದುವರೆಸಿದ ಪೊಲೀಸರು, ದಿನಾಂಕ:09/04/2025 ರಂದು ಬಳ್ಳಾರಿ ಜಿಲ್ಲೆಯ ಹಗರಿ ಬೊಮ್ಮನಹಳ್ಳಿ ಶಾಲೆಯೊಂದರ ಬಳಿ ಈ ಪ್ರಕರಣದ ಮತ್ತೋರ್ವ ಆರೋಪಿಯನ್ನು ವಶಕ್ಕೆ ಪಡೆಯಲಾಯಿತು. ವಶಕ್ಕೆ ಪಡೆದ ಆರೋಪಿಯನ್ನು ವಿಚಾರಣೆಗೊಳಪಡಿಸಿದಾಗ, ಈ ಪ್ರಕರಣದಲ್ಲಿ ತಾನು ಮತ್ತು ನನ್ನ ಸ್ನೇಹಿತರಿಬ್ಬರು ಸೇರಿಕೊಂಡು ಒಂದು ಇಟಿಯೋಸ್ ಕಾರನ್ನು ಕೃತ್ಯಕ್ಕೆ ಬಳಸಲಾಗಿರುತ್ತದೆ ಎಂದು ತಿಳಿಸಿರುತ್ತಾನೆ.
ದಿನಾಂಕ:11/04/2025 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 6 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆಯಲಾಯಿತು.
ಪೊಲೀಸ್ ಅಭಿರಕ್ಷೆಗೆ ಪಡೆದ ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆ ಮಾಡಲಾಗಿ. ಈ ಪ್ರಕರಣವು ಸೇರಿದಂತೆ ಇತರೆ ಮೂರು ಮನೆಗಳ್ಳತನ ಮಾಡಿರುವುದಾಗಿ ತಿಳಿಸಿರುತ್ತಾನೆ. ಮೂರು ಮನೆಗಳ್ಳತನವು ತಾನೋಬ್ಬನೇ ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ
ಕಳವು ಮಾಡಿದ ಚಿನ್ನಾಭರಣವೆಲ್ಲವನ್ನು ಸ್ನೇಹಿತರ ಮುಖಾಂತರ ಗಂಗಾವತಿ ಹಾಗೂ ಹಗರಿಬೊಮ್ಮನಹಳ್ಳಿಯ ಚಿನ್ನದ ಅಂಗಡಿಯಲ್ಲಿ ಅಡಮಾನವಿಟ್ಟಿರುವುದಾಗಿ ತಿಳಿಸಿ, ಆ ಸ್ನೇಹಿತರ ಜೊತೆ ಗೋವಾಕ್ಕೆ ಹೋಗಿ ಕಳವು ಮಾಡಿದ * 6 ಲಕ್ಷಕ್ಕೂ ಹೆಚ್ಚು ನಗದನ್ನು ಉಪಯೋಗಿಸಿಕೊಂಡು ಮೋಜು-ಮಸ್ತಿ ಮಾಡಿರುವುದಾಗಿ ತಿಳಿಸಿರುತ್ತಾರೆ.
ದಿನಾಂಕ:12/04/2025 ರಂದು ಹಗರಿಬೊಮ್ಮನಹಳ್ಳಿಯ ಚಿನ್ನದ ಅಂಗಡಿಯಿಂದ ಅಡಮಾನವಿಟ್ಟಿದ್ದ 78 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಯಿತು.
ದಿನಾಂಕ:14/04/2025 ರಂದು ಹಗರಿಬೊಮ್ಮನಹಳ್ಳಿಯ ಮತ್ತೊಂದು ಚಿನ್ನದ ಅಂಗಡಿಯಿಂದ ಅಡಮಾನವಿಟ್ಟಿದ್ದ 70 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಯಿತು.
ದಿನಾಂಕ:15/04/2025 ರಂದು ಗಂಗಾವತಿಯಲ್ಲಿರುವ ಚಿನ್ನದ ಅಂಗಡಿಯಿಂದ ಅಡಮಾನವಿಟ್ಟಿದ್ದ 65 ಗ್ರಾಂ
ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಯಿತು.
ಒಟ್ಟಾರೆ ಈ ಪ್ರಕರಣದಲ್ಲಿ 213 ಗ್ರಾಂ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ಇದರ ಮೌಲ್ಯ 18,10,000/-(ಹದಿನೆಂಟು ಲಕ್ಷದ ಹತ್ತು ಸಾವಿರ ರೂಪಾಯಿ)
ದಿನಾಂಕ:16/04/2025 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನಾಯ್ಯಾಲಯವು ಆರೋಪಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿರುತ್ತೆ.
ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ. ವಿ.ಜೆ ಸಜೀತ್ ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ ಮತ್ತು ಯಲಹಂಕ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ. ನರಸಿಂಹಮೂರ್ತಿ ರವರ ನೇತೃತ್ವದಲ್ಲಿ ಯಲಹಂಕ ಉಪನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ. ಸುಧಾಕರ್‌ರೆಡ್ಡಿ.ಎಹಾಗೂ ಇತರೆ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿ ಯಾಗಿರುತ್ತಾರೆ.









