720 ಲಕ್ಷ ಬೆಲೆ ಬಾಳುವ ವಿವಿಧ ಕಂಪನಿಯ 16 ದ್ವಿ-ಚಕ್ರ ವಾಹನ ವಶ.
ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಿರುವ ಫಿರಾದುದಾರರು ದಿನಾಂಕ:02/07/2024 ರಂದು ದ್ವಿ-ಚಕ್ರ ವಾಹನವನ್ನು ಮನೆಯ ಮುಂಭಾಗ ನಿಲ್ಲಿಸಿದ್ದು, ಮಾರನೆಯ ದಿನ ಬೆಳಿಗ್ಗೆ ನೋಡಲಾಗಿ, ದ್ವಿ-ಚಕ್ರ ವಾಹನವನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ. ಈ ಕುರಿತು ಪಿರಾದಿಯವರು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದ್ವಿ-ಚಕ್ರ ವಾಹನ ಕಳವು ಪ್ರಕರಣ ದಾಖಲಾಗಿರುತ್ತದೆ.
ಈ ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಸಂಗ್ರಹಿಸಿ, ದಿನಾಂಕ:12.07.2024 ರಂದು ಬೆಳಿಗ್ಗೆ ಬಾಗಲಗುಂಟೆ ಠಾಣಾ ಸರಹದ್ದಿನ ಶೆಟ್ಟಿಹಳ್ಳಿ, ರೈಲ್ವೆ ಗೇಟ್ನ ಪಕ್ಕದಲ್ಲಿರುವ ಮೈದಾನದ ಬಳಿ ಮೂರು ವ್ಯಕ್ತಿಗಳನ್ನು ಒಂದು ದ್ವಿ-ಚಕ್ರ ವಾಹನ ಸಮೇತ ವಶಕ್ಕೆ ಪಡೆದುಕೊಳ್ಳಲಾಯಿತು. ನಂತರ ಅವರುಗಳನ್ನು ಠಾಣೆಗೆ ಕರೆತಂದು ವಿಚಾರಣೆಗೊಳಪಡಿಸಲಾಗಿ ಈ ಪ್ರಕರಣದ ಒಂದು ದ್ವಿ-ಚಕ್ರ ವಾಹನವೂ ಸೇರಿದಂತೆ ಇನ್ನೂ ಇತರೆ 15 ದ್ವಿಚಕ್ರ ವಾಹನಗಳನ್ನು ಕಳವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾರೆ.
ದಿನಾಂಕ:13/07/2024 ರಂದು ಮಾನ್ಯ ನ್ಯಾಯಾಲಯಕ್ಕೆ ಮೂವರು ವ್ಯಕ್ತಿಗಳನ್ನು ಹಾಜರಡಿಸಿ, ಐದು ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು. ಆರೋಪಿಗಳೆಲ್ಲರನ್ನು ಸುದೀರ್ಘವಾಗಿ ವಿಚಾರಣೆ ಮಾಡಲಾಗಿ ಕಳವು ಮಾಡಿದ ದ್ವಿ-ಚಕ್ರ ವಾಹನಗಳ ಪೈಕಿ 09-ದ್ವಿ-ಚಕ್ರ ವಾಹನಗಳನ್ನು ಹಾಸನ ಜಿಲ್ಲೆ ಹಾಗೂ 07-ದ್ವಿ-ಚಕ್ರ ವಾಹನಗಳನ್ನು ಮಂಡ್ಯದಲ್ಲಿ ಮಾರಾಟ ಮಾಡಿರುವುದಾಗಿ ತಿಳಿಸಿರುತ್ತಾರೆ. ದಿನಾಂಕ:14/07/2024 ಮತ್ತು ದಿನಾಂಕ:15/07/2024 ರಂದು ದ್ವಿ-ಚಕ್ರ ವಾಹನಗಳನ್ನು ಖರೀದಿಸಿದ್ದ ವ್ಯಕ್ತಿಗಳಿಂದ 15 ದ್ವಿ-ಚಕ್ರ ವಾಹನಗಳನ್ನುವಶಕ್ಕೆ ಪಡೆದುಕೊಳ್ಳಲಾಗಿರುತ್ತದೆ. ಈ ಪ್ರಕರಣದಿಂದ 20,00,000/-(ಇಪ್ಪತ್ತು ಲಕ್ಷ ರೂಪಾಯಿ) ಬೆಲೆಯ ವಿವಿಧ ಕಂಪನಿಯ ಒಟ್ಟು 16 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶ್ವಸಿಯಾಗಿರುತ್ತಾರೆ. ದಿನಾಂಕ:16/07/2024 ರಂದು ಮೂವರು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ.

ಈ ಪ್ರಕರಣದ ಆರೋಪಿಗಳ ಬಂಧನದಿಂದ 1) ಬಾಗಲಗುಂಟೆ ಪೊಲೀಸ್ ಠಾಣೆಯ-2 ದ್ವಿ-ಚಕ್ರ ವಾಹನ ಪ್ರಕರಣ, 2) ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ-4 ದ್ವಿ-ಚಕ್ರ ವಾಹನ ಪ್ರಕರಣಗಳು, 3) ಸುಬ್ರಮಣ್ಯಪುರ ಪೊಲೀಸ್ ಠಾಣೆಯ-4 ದ್ವಿ-ಚಕ್ರ ವಾಹನ ಪ್ರಕರಣ, 4) ಕುಮಾರಸ್ವಾಮಿಲೇಔಟ್ ಪೊಲೀಸ್ ಠಾಣೆಯ- ದ್ವಿ-ಚಕ್ರ ವಾಹನ ಪ್ರಕರಣ, 5) ಕೆಂಗೇರಿ ಪೊಲೀಸ್ ಠಾಣೆಯ-I ದ್ವಿ-ಚಕ್ರ ವಾಹನ ಪ್ರಕರಣ, 6) ಮೈಕೋಲೇಔಟ್ ಪೊಲೀಸ್ ಠಾಣೆಯ-1 ದ್ವಿಚಕ್ರ ವಾಹನ ಪ್ರಕರಣ, 7) ಜೆ.ಪಿ.ನಗರ ಪೊಲೀಸ್ ಠಾಣೆಯ-1 ದ್ವಿ-ಚಕ್ರ ವಾಹನ ಪ್ರಕರಣ ೪) ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯ-1 ದ್ವಿ-ಚಕ್ರ ವಾಹನ ಪ್ರಕರಣ ಸೇರಿದಂತೆ ಒಟ್ಟು 15 ದ್ವಿ-ಚಕ್ರ ಪ್ರಕರಣಗಳು ಪತ್ತೆಯಾಗಿದ್ದು, ಉಳಿದ 1 ದ್ವಿ-ಚಕ್ರ ವಾಹನಗಳ ವಾರಸುದಾರರ ಪತ್ತೆ ಕಾರ್ಯ ಪ್ರಗತಿಯಲ್ಲಿದೆ.
ಈ ಪ್ರಕರಣದ ಪತ್ತೆ ಕಾರ್ಯವನ್ನು ಉತ್ತರ ವಿಭಾಗ ಉಪ ಪೊಲೀಸ್ ಆಯುಕ್ತರಾದ ಶ್ರೀ.ಸೈದುಲು ಅಡಾವತ್, ಐ.ಪಿ.ಎಸ್. ರವರ ಮಾರ್ಗದರ್ಶನದಲ್ಲಿ ಶ್ರೀ. ಸದಾನಂದ ಎ ತಿಪ್ಪಣ್ಣವರ್, ಸಹಾಯಕ ಪೊಲೀಸ್ ಆಯುಕ್ತರು ಪೀಣ್ಯ ಉಪ ವಿಭಾಗ ರವರ ನೇತೃತ್ವದಲ್ಲಿ, ಬಾಗಲಗುಂಟೆ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ. ಹನುಮಂತರಾಜು ಮತ್ತು ಅಧಿಕಾರಿ/ಸಿಬ್ಬಂದಿಯವರುಗಳು ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.










